Tuesday, July 16, 2024
ಮನೆಬಿಸಿ ಬಿಸಿ ಸುದ್ದಿಮತದಾನಕ್ಕೆ ಕ್ಷಣಗಣನೆ - ಎಲ್ಲರೂ ಮತ ಹಾಕಿ

ಮತದಾನಕ್ಕೆ ಕ್ಷಣಗಣನೆ – ಎಲ್ಲರೂ ಮತ ಹಾಕಿ

ಆಳಂದ ; ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಾಳೆ ( ಮೇ 7) ಮಂಗಳವಾರ ( ಎರಡನೇ ಹಂತ ) ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ಮತದಾನ ನಡೆಯಲಿದೆ.ಚುನಾವಣೆಗೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸರ್ವ ಸನ್ನದ್ಧವಾಗಿದೆ ಎಂದು ಆಳಂದ ಸಹಾಯಕ ಚುನಾವಣಾಧಿಕಾರಿ ಮಹಾಂತೇಶ್ ಮುಳಗುಂದಾ ತಿಳಿಸಿದ್ದಾರೆ.

ಆಳಂದ ಪಟ್ಟಣದಲ್ಲಿ ಸೋಮವಾರ ಸಂಜೆ ‘ನಮ್ಮ ಆಳಂದ’ ಜೊತೆಗೆ ಮಾತನಾಡಿದ ಅವರು, ಕ್ಷೇತ್ರದಾದ್ಯಂತ ಮುಕ್ತ, ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲಾ ಪೂರ್ವಸಿದ್ಧತೆ ಕೈಗೊಂಡಿದ್ದು, ಕೇಂದ್ರದ ಪೋಲೀಸ್ ಪಡೆ ಭದ್ರತೆಗೆ ಈಗಾಗಲೆ ಆಗಮಿಸಿದೆ.ಎಲ್ಲಾ ಮತಗಟ್ಟೆಯಲ್ಲಿ ಕನಿಷ್ಠ ಮೂಲಸೌಕರ್ಯ ಇರಲಿದೆ ಎಂದರು.

ಸಖಿ, ಥೀಮ್ ಬೂತ್‍ಗೆ ಭೇಟಿ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಿದ ಸಖಿ ಬೂತ್ ಗೆ ಭೇಟಿ ನೀಡಿ,ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ, ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ತಾಲ್ಲೂಕಿನಲ್ಲಿ ಸಖಿ, ಥೀಮ್, ಯುವ ಹಾಗೂ ವಿಶೇಷಚೇತನರನ್ನು ಗುರಿಯಾಗಿಸಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಖಿ ಪಿಂಕ್ ಬೂತ್, ತಲಾ ಒಂದು ಯುವ, ಪಿ.ಡಬ್ಲ್ಯೂ.ಡಿ. ಹಾಗೂ ಥೀಮ್ ಬೇಸ್ಡ್ ಬೂತ್ ಸ್ಥಾಪಿಸಲಾಗಿದೆ.ಸಖಿ ಮತಗಟ್ಟೆಗಳಿವೆ. ಅಲ್ಲಿ ಎಲ್ಲರೂ ಮಹಿಳಾ ಸಿಬ್ಬಂದಿಯೇ ಕೆಲಸ ನಿರ್ವಹಿಸುತ್ತಾರೆ. ಮಹಿಳಾ ಮತದಾರರನ್ನು ಆಕರ್ಷಿಸಲು ‘ಸಖಿ’ ಮತಗಟ್ಟೆ ಸ್ಥಾಪಿಸಲಾಗಿದೆ. ಅಂಗವಿಕಲರೇ ಅವುಗಳನ್ನು ನಿರ್ವಹಿಸುವರು ಎಂದರು.

 

ಮತಗಟ್ಟೆಗಳಿಗೆ ಹೆಜ್ಜೆ ; ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಸೋಮವಾರ ಆಳಂದ ಮಸ್ಟರಿಂಗ್ ಕೇಂದ್ರಕ್ಕೆ ಬಂದು ಚುನಾವಣಾ ಸಾಮಗ್ರಿಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ತೆಗೆದುಕೊಂಡ ಸಿಬ್ಬಂದಿ ತೆರಳಿದರು.

ಇವಿಎಂ, ವಿವಿಪ್ಯಾಟ್, ಕಂಟ್ರೋಲ್ ಯೂನಿಟ್, ಶಾಹಿ, ಒಆರ್‌ಎಸ್‌ ಪೊಟ್ಟಣ, ಮತದಾರರ ಪಟ್ಟಿಗಳೊಂದಿಗೆ ಬಸ್‌ಗಳ ,ಮೂಲಕ ಮತಗಟ್ಟೆಗಳಿಗೆ ತೆರಳಿದರು. ಇದಕ್ಕೂ ಮುನ್ನ ಸೆಕ್ಟರ್‌ವಾರು ಮತದಾನಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ವಿತರಿಸಲಾಯಿತು. ಸಿಬ್ಬಂದಿಗೆ ಅನ್ನ, ಸಾಂಬಾರ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ಸಿಬ್ಬಂದಿ ಕುಳಿತುಕೊಳ್ಳಲು ಶಾಮಿಯಾನ ಹಾಕಲಾಗಿತ್ತು. ಬಿಸಿಲು, ಉಷ್ಣ ಅಲೆಗಳಿಂದ ಸಿಬ್ಬಂದಿ ಪರದಾಟ ನಡೆಸುವುದು ಕಂಡು ಬಂತು. ಬೇಗ ಚುನಾವಣೆ ಮುಗಿದರೆ ಸಾಕು ಎನ್ನುತ್ತಿದ್ದರು.

ಸುದ್ದಿಗೋಷ್ಠಿಯಲ್ಲಿ ತಹಶಿಲ್ದಾರರ ಪ್ರಕಾಶ್ ಹೊಸಮನಿ ಇತರರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular