ಲೋಕಸಮರ: ರಾಜ್ಯದ 14 ಕ್ಷೇತ್ರದಲ್ಲಿ ಮತದಾನ ಆರಂಭ

0
56

ಕಲಬುರಗಿ: ಲೋಕಸಭೆ ಚುನಾವಣೆ ಮೂರನೇ ಹಂತದ ಮತದಾನ ಆರಂಭಗೊಂಡಿದ್ದು, ಕಲಬುರಗಿ ಲೋಕಸಭೆ ಕ್ಷೇತ್ರದ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದರು.

ನಗರದ ಎನ್.ಜಿ.ಓ ಕಾಲೋನಿಯ ಜವಾಹರ್ ಶಿಕ್ಷಣ ಸಂಸ್ಥೆ ಬೂತ್ ಸಂಖ್ಯೆ 93 ರಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ಮತದಾನ ಮಾಡಿ ಮಾತಾನಾಡಿದ ಅವರು ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Contact Your\'s Advertisement; 9902492681

ಅದೇ ರೀತಿಯಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಅವರ ಧರ್ಮಪತ್ನಿ ಶೃತಿ ಖರ್ಗೆ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಚಿತ್ತಾಪುರ ವಿಧಾನಸಭಾ ಮತಕ್ಷೇತ್ರದ ಗುಂಡಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು 100% ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here