ಕಲಬುರಗಿಯಲ್ಲಿ 11 ಗಂಟೆಯವರೆಗೆ 22.64% ಮತದಾನ

0
83

ಕಲಬುರಗಿ: ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ 22.64 ಮತದಾನವಾಗಿದ್ದು, ಸುಡು ಬಿಸಿಲಿನಲ್ಲಿ ಮತದಾರರ ಸರದಿ ಸಾಲಿನಲ್ಲಿ ಮತದಾನ ಮಾಡುತ್ತಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಕಲಬುರಗಿ ನಗರ ಪ್ರದೇಶದಲ್ಲಿ ಬಿರುಸಿನ ಮತದಾನ ನಡೆದಿದೆ.

Contact Your\'s Advertisement; 9902492681

ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುಲಬರ್ಗಾ ದಕ್ಷಿಣ ಮತಕ್ಷೇತ್ರದ ಜಗತ್ ಪ್ರದೇಶದ ಮತಗಟ್ಟೆ ಸಂ.61ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಇದೇ ಸಂದರ್ಭದಲ್ಲಿ ಮತ ಚಲಾಯಿಸಲು ಬಂದ ಹಿರಿಯ ಜೀವಿಗಳಿಗೆ ನೆರವಾದರು.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಗುಲಬರ್ಗಾ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ‌ವಿಜಯ ವಿದ್ಯಾಲಯ ಪದವಿ ಪೂರ್ವ ಕಾಲೇಜು ಮತಗಟ್ಟೆ ಸಂ.169ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here