ಬಿಸಿ ಬಿಸಿ ಸುದ್ದಿ

ಶರಣ ಸಂಸ್ಕøತಿ ಮೈಗೂಡಿಸಿಕೊಂಡರೆ ಬದುಕು ಅರ್ಥಪೂರ್ಣ

ಕಲಬುರಗಿ: ಬಸವಣ್ಣನವರು ಶ್ರೇಷ್ಠ ಸಮಾಜ ಸುಧಾರಕರು, ತತ್ವಜ್ಞಾನಿಗಳು, ಸಮಾಜಶಾಸ್ತ್ರಜ್ಞರು, ರಾಜಕೀಯ ಚಿಂತಕರು, ಅರ್ಥಶಾಸ್ತ್ರಜ್ಞರು, ಲಿಂಗಾಯತ ಧರ್ಮಗುರುವಾಗಿ, ವಿಶ್ವಕ್ಕೆ ಮಾದರಿಯಾದಂತಹ ಕಾರ್ಯವನ್ನು ಮಾಡಿ ವಿಶ್ವಗುರುವಾಗಿದ್ದಾರೆ. ಸಕಲ ಜೀವ ರಾಶಿಗಳಿಗೆ ಲೇಸನ್ನೇ ಬಯಸುವ ಶರಣ ಸಂಸ್ಕøತಿ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಅರ್ಥಪೂರ್ಣವಾಗಲು ಸಾಧ್ಯವಿದೆ ಎಂದು ಜಿಲ್ಲಾ ವೀರಶೈವ-ಲಿಂಗಾಯತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಗಣಮುಖಿ ಹೇಳಿದರು.

ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ 891ನೇ ಬಸವ ಜಯಂತಿ ಪ್ರಯುಕ್ತ ಗುರುವಾರ ಏರ್ಪಡಿಸಲಾಗಿದ್ದ ಮಕ್ಕಳಿಗಾಗಿ ಬಸವಣ್ಣನವರ ವೇಷಭೂಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ಮಾತನಾಡಿ, ಬಸವೇಶ್ವರರು ಶಿವನನ್ನು ಪೂಜಿಸಿ, ಶಿವನೇ ತಾವಾಗಿದ್ದಾರೆ. ಅವರು ಒಬ್ಬ ವ್ಯಕ್ತಿಯಲ್ಲ, ಬದಲಿಗೆ ಅವರು ಅದ್ಭುತವಾದ ಅನಂತ ಶಕ್ತಿಯಾಗಿದ್ದಾರೆ. ಸರ್ವರ ಏಳಿಗೆಗಾಗಿ ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಹೋರಾಟ ಮಾಡಿದ್ದಾರೆ. ಬಾಲ್ಯದಿಂದಲೇ ಬಸವಾದಿ ಶರಣರ ಸಂಸ್ಕøತಿ, ಪರಂಪರೆಯನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಹಾಗೂ ಶರಣ ಚಿಂತಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಮುಖ್ಯಸ್ಥ ಅಮರ ಜಿ.ಬಂಗರಗಿ, ಮುಖ್ಯ ಶಿಕ್ಷಕಿ ಚಂಪಾಕಲಾ ಬಿರಾದಾರ, ಶಿಕ್ಷಕಿ ನಿಂಗಮ್ಮ ಬಿರಾದಾರ, ಪ್ರಮುಖರಾದ ಗೀತಾ ಬಿರಾದಾರ, ಲತಾ ಬಿರಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಅಥರ್ವ, ಆಯುಷ್ ಎಸ್, ಆಯುಷ್ ಎನ್, ಆಯುಷ್ ಎಂ, ಸಮರ್ಥ, ಹರ್ಷಲ್ ಎಸ್ ಬಸವಣ್ಣನವರ ವೇಷಭೂಷಣ ಧರಿಸಿ, ವಚನಗಳನ್ನು ಪಠಿಸಿ, ಸಂಭ್ರಮಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago