ಕಲಬುರಗಿ : ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತ್ಯೋತ್ಸವ ನಿಮಿತ್ಯವಾಗಿ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರವನ್ನು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ (ಎಎಸ್‍ಎ) ಕರ್ನಾಟಕದ ಜಿಲ್ಲಾ ಘಟಕ ವತಿಯಿಂದ ಮೇ 11 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಎಸ್. ಎಮ್. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ನೂತನ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶರಾದ ಬಿ.ಡಿ. ಪಾಟೀಲ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆರಡಿಮಲ್ಲಯ್ಯ ಕಣ್ಣೀರಾ ಸಂಶೋಧಕರು, ಶಿವಮೊಗ್ಗ ಹಾಗೂ ಡಾ. ಹ.ರಾ ಮಹೇಶ ಚಿಂತಕರು, ಬೆಂಗಳೂರು ಭಾಗವಹಿಸಲಿದ್ದಾರೆ. ಅದರಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದು ಕಾರ್ಯಕ್ರಮದಲ್ಲಿ 600 ರಿಂದ 800 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಲ್ಲಿದೆ ಎಂದು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.