SSLC ಫಲಿತಾಂಶ: ಕನ್ನಡ ವಿಷಯದಲ್ಲಿ ಹೆಚ್ಚು ಅಂಕಪಡೆದವರಿಗೆ ಕಲಬುರಗಿ ಕಸಾಪದಿಂದ ಸತ್ಕಾರ

1
376

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಸಕ್ತ ಸಾಲಿನ ಹತ್ತನೇ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹತ್ತರ ಕನ್ನಡಕ್ಕೆ ಗುಣಾಗ್ರಣಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 17 ರ ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ಭಾಷೆಯ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯವಾಗಿದೆ. ಮಾತೃ ಭಾಷೆಯ ಬೆಳವಣಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹಚ್ಚುವ ಕಾರ್ಯವನ್ನು ಈ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ.

Contact Your\'s Advertisement; 9902492681

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು 125 ರ ಪೈಕಿ 120 ಕ್ಕೂ ಹೆಚ್ಚು, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಕನ್ನಡದಲ್ಲಿ 100 ಕ್ಕೆ 95 ಕ್ಕೂ ಹೆಚ್ಚು ಅಂಕ ಪಡೆದ ಆಸಕ್ತ ವಿದ್ಯಾರ್ಥಿಗಳು ಜಿಲ್ಲಾ ಕಸಾಪ ದ ಸಂಘಟನಾ ಕಾರ್ಯದರ್ಶಿ ಸಿದ್ಧಲಿಂಗ ಜಿ ಬಾಳಿ – 95900 92113, ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ-98865 60869 ಗೆ ಸಂಪರ್ಕಿಸಿ ತಮ್ಮ ಹೆಸರನ್ನು 14 ನೇ ತಾರೀಖಿನೊಳಗೆ ನೋಂದಾಯಿಸಲು ಕೋರಲಾಗಿದೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here