ಹೈದರಾಬಾದ್ ಕರ್ನಾಟಕ

ಸುಕ್ಷೇತ್ರ ನರೋಣಾದಲ್ಲಿ ಶ್ರೀ ಛಲ ಲಿಂಗ ಮಲ್ಲಿಕಾರ್ಜುನ ದೇವಸ್ಥಾನದ 9 ನೇ ಜಾತ್ರೆ, ರಥೊತ್ಸವ ನಾಳೆ

ಆಳಂದ: ತಾಲೂಕಿನ ಸುಕ್ಷೇತ್ರ ನರೋಣಾ ಗ್ರಾಮದ ಶ್ರೀ ಛಲ ಲಿಂಗ ಮಲ್ಲಿಕಾರ್ಜುನ ದೇವಸ್ಥಾನ 9 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಳೆ ಸಾಯಂಕಾಲ 5:00ಗೆ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ ಅವರ ದಿವ್ಯ ಸಾನಿಧ್ಯದಲ್ಲಿ ಭವ್ಯರಥೋತ್ಸವ ಜರಗಲಿದೆ.

ಈ ಜಾತ್ರಾ ಮಹೋತ್ಸವದ ಪ್ರಯುಕ್ತ ಒಟ್ಟು ಐದು ದಿನಗಳ ಕಾಲ ಜಾನುವಾರುಗಳ ಜಾತ್ರೆ ಕೂಡ ಹಮ್ಮಿಕೊಳ್ಳಲಾಗಿದ್ದು ಈ ಒಂದು ಜಾನುವಾರುಗಳ ಜಾತ್ರೆಗೆ ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ನಾಡಿನ ಅನೇಕ ಭಾಗಗಳಿಂದ ರೈತರು ಅಪಾರ ಸಂಖ್ಯೆಯಲ್ಲಿ ಜನವಾರುಗಳನ್ನು ತರಲಿದ್ದಾರೆ.

ರಥೋತ್ಸವ ದಿನದಂದು ಶಿವಪುತ್ರಪ್ಪ ರೇವಣಸಿದ್ದಪ್ಪ ಚುಚಕೋಟಿ ಅವರ ಮನೆಯಿಂದ ಪಲ್ಲಕ್ಕಿಯ ಮೆರವಣಿಗೆ ಹಾಗೂ ಮಾತೋಶ್ರೀ ಬಸ್ಸಮ್ಮ ಗಂಡ ದಿವಂಗತ. ಸುಭಾಷ್ ಚಂದ್ರ ಬೋಳಶೆಟ್ಟಿ ಅವರ ಮನೆಯಿಂದ ರಥೋತ್ಸವದ ಕಳಸದ ಭವ್ಯ ಮೆರವಣಿಗೆ ನರೋಣಾ ಗ್ರಾಮದ ಪ್ರಮುಖ ಬೀದಿಗಳಿಂದ ಮಂದಿರದವರೆಗೆ ಜರುಗಲಿದ್ದು ಈಗಾಗಲೇ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾತ್ರೆಗೆ ಬರುವಂತ ಎಲ್ಲಾ ಭಕ್ತಾದಿಗಳಿಗೆ ಊಟ -ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ಜಾತ್ರಾ ಕಮಿಟಿಯ ಮುಖ್ಯಸ್ಥರಾದ ದಯಾನಂದ ಎಸ್ ಬೋಳಶೆಟ್ಟಿ ನರೋಣಾ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

3 hours ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

5 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

5 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

5 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

6 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

9 hours ago