ನೀತಿ ಸಂಹಿತೆ ವಿನಾಯಿತಿ ಕೋರಿ ಚುನಾವಣೆ ಆಯೋಗಕ್ಕೆ ಪ್ರಿಯಾಂಕ್ ಖರ್ಗೆ ಪತ್ರ

0
24

ಕಲಬುರಗಿ: ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ‌ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

223 ತಾಲೂಕುಗಳನ್ನು ಈಗಾಗಲೇ ಬರಪೀತ ತಾಲೂಕುಗಳೆಂದು ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಮುಂಗಾರು ವಿಳಂಬವಾಗಲಿದೆ. ಪ್ರಯುಕ್ತ ಈಗಾಗಲೇ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಉಲ್ಬಣವಾಗಿರುತ್ತದೆ. ಮುಂದಿನ ಎರಡು ತಿಂಗಳುಗಳ ವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧವಾದ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅವಶ್ಯಕವಾಗಿರುತ್ತದೆ.

Contact Your\'s Advertisement; 9902492681

ಆದ್ದರಿಂದ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಇಲಾಖಾ ಸಚಿವರಿಗೆ ಅನುಮತಿ ನೀಡಲು ಕೋರುತ್ತಾ ಸದರಿ ಸಭೆ ಹಾಗೂ ಸಭೆಯ ನಿರ್ಧಾರಗಳನ್ನು ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಲು ಕೋರುತ್ತಿರುವುದಾಗಿ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here