ಕೈಕೊಟ್ಟ ಪ್ರಿಯಕರ: ನೇಣಿಗೆ ಪ್ರೇಯಸಿ ಶರಣು

0
26

ಕಲಬುರಗಿ: ಪ್ರಿಯಕರನು ಮದುವೆಯಾಗಲು ನಿರಾಕರಿಸಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕೋಟನೂರ್ (ಡಿ) ಸಮೀಪದ ಯಲ್ಲಾಲಿಂಗ್ ಕಾಲೋನಿಯಲ್ಲಿ ಸಂಭವಿಸಿದೆ. ಮೃತಳನ್ನು ಪುಷ್ಪಾ ತಂದೆ ತುಕಾರಾಮ್ ಎಂದು ಗುರುತಿಸಲಾಗಿದೆ.

ನಗರದ ಫಿಲ್ಟರ್ ಬೆಡ್ ಕಾಲೋನಿಯ ಕಿರಣ್ ಎಂಬ ಯುವಕ ಪುಷ್ಪಾಳನ್ನು ಪ್ರೀತಿಸುತ್ತಿದ್ದ ಹಾಗೂ ಮದುವೆಯಾಗುವುದಾಗಿಯೂ ಹೇಳಿದ್ದ ಎನ್ನಲಾಗಿದೆ. ನಂತರ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಮದುವೆಯಾಗಲು ನಿರಾಕರಿಸಿದ್ದರಿಂದ ಪುಷ್ಪಾಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯ ಪೋಲಿಸ್ ಠಾಣೆಯಲ್ಲಿ ಕಿರಣ್ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here