ಅಸಮಾನತೆಯ ವ್ಯವಸ್ಥೆಯೇ ನಮ್ಮ ನಿಜವಾದ ಶತ್ರು: ಚಿತ್ರ ನಟ ಚೇತನ ಅಹಿಂಸಾ

ಕಲಬುರಗಿ: ಕಾಯಕ- ದಾಸೋಹ ಮತ್ತು ಸಮಾನತೆಯ ತತ್ವಗಳನ್ನು ಸಾರುವ ಮೂಲಕ 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಅನುಭವ ಮಂಟಪದಲ್ಲಿ ಜಾರಿಗೊಳಿಸಿದ ವಚನ ಚಳವಳಿಯ ನೇತಾರ ಬಸವಣ್ಣನವರು ಈ ನಾಡಿಗೆ ವಿಶಿಷ್ಟ ಕೊಡುಗೆ ನೀಡಿದರು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಅಭಿಪ್ರಾಯಪಟ್ಟರು.

ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಕಾಯಕ ಶರಣರ ಒಕ್ಕೂಟದ ಸಹಯೋಗದಲ್ಲಿ ನಗರದ ಜಗತ್ ವೃತ್ತದ ಬಳಿ ಇರುವ ಬಸವ ಸಾಂಸ್ಕೃತಿಕ ವೇದಿಕೆಯಲ್ಲಿ ಭಾನುವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಸವಾದಿ ಶರಣರು ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

‘ಪ್ರಸ್ತುತ ಸನ್ನಿವೇಶಕ್ಕೆ ಬಸವತತ್ವ’ ವಿಷಯ ಕುರಿತು ಅನುಭಾವ ನೀಡಿದ ಬೆಂಗಳೂರಿನ ಚೇತನ ಅಹಿಂಸಾ ಮಾತನಾಡಿ, ಸ್ವತಂತ್ರ ಆಚರಣೆ, ಭಿನ್ನ ಆಚರಣೆ, ವಿಭಿನ್ನ ಸಂಸ್ಕೃತಿ ಹೊಂದಿರುವ
ಬಸವ ಧರ್ಮಕ್ಕೆ ಮಾನ್ಯತೆ ಕೊಡಿ. ಇಲ್ಲದಿದ್ದಲ್ಲಿ ಉಳಿದ ಧರ್ಮದ ಮಾನ್ಯತೆ ರದ್ದು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ ಅವರ ವಿಚಾರಗಳಿಂದ ಅಸಮಾನತೆ ತೊಲಗಿ ಉತ್ತಮ ಸಮಾಜ ನಿರ್ಮಾಣವಾಗಬಲ್ಲದು ಎಂದು ಹೇಳಿದರು.

ಆರ್ಥಿಕ ಮರು ಹಂಚಿಕೆ ಮಾಡುವ ಮೂಲಕ ವಂಚಿತ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು. ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ಕೂಡ ಸಮಾನ ಅವಕಾಶ ಕಲ್ಪಿಸಬೇಕು ಎಂದರು.

ಬುದ್ಧನ ತರುವಾಯ ಬಸವಣ್ಣ ಹಾಗೂ ಶರಣರು ವೈದಿಕತೆಯನ್ನು ವಿರೋಧಿಸಿದರು.ಬಸವಣ್ಣನವರನ್ನು ಹಾಡಿ ಹೊಗಳುವ ಬದಲು ಅವರ ಕನಸನ್ನು ನನಸು ಮಾಡಬೇಕು. ಅಸಮಾನತೆಯ ವ್ಯವಸ್ಥೆಯೇ ನಮ್ಮ ನಿಜವಾದ ಶತ್ರು. ಇದನ್ನು ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಜಾತಿ, ಭಾಷೆ, ಲಿಂಗ, ಆಧ್ಯಾತ್ಮಿಕ, ಸಾಮಾಜಿಕ ಮುಂತಾದ ತಾರತಮ್ಯವಿದ್ದು, ಬಸವವಾದಿಗಳು ಸತ್ಯಮಾರ್ಗದವರು. ಬಸವ ಸಿದ್ಧಾಂತವನ್ನು ಎಲ್ಲೆಡೆ ಪಸರಿಸಿ ಸಮ ಸಮಾಜ ಕಟ್ಟಲು ಮುಂದಾಗಬೇಕು ಎಂದು ತಿಳಿಸಿದರು.

ಜಾತಿ ವಿನಾಶ, ಲೈಂಗಿಕ ಅಲ್ಪ ಸಂಖ್ಯಾತರ ಪರವಾಗಿ ನಿಲ್ಲಬೇಕು, ಕಾಯಕ ದಾಸೋಹದ ಸಮಾಜವಾದ ಚಿಂತನೆ, ಮಧ್ಯವರ್ತಿ ಮೀರಿರುವ ದೇವರು, ದೇವಾಲಯ ಭಾಷೆಯ ಚಳವಳಿ ಈ ಬಗ್ಗೆ ಚಿಂತನೆ ನಡೆಸಬೇಕು.

ಚಿಗರಳ್ಳಿ ಕ್ರಾಸ್ ಮರುಳಶಂಕರ ದೇವರ ಮಠದ ಸಿದ್ಧಬಸವ ಕಬಿರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ, ಎಚ್ಕೆಇ ಸೊಸೈಟಿಯ ಅಧ್ಯಕ್ಷ ಶಶೀಲ್ ಜಿ. ನಮೋಶಿ, ಕಾಂಗ್ರೆಸ್ ಮುಖಂಡ ನೀಲಕಂಠ ಮೂಲಗೆ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ, ಕಾಯಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವರಾಜ ಪಾಟೀಲ, ಸಂಗಮೇಶ ಮಹಾಗಾಂವಕರ, ಉತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ರಾಚಟ್ಟೆ, ಶರಣು ಐಟಿ ಸ್ವಾಗತಿಸಿದರು. ಸಂತೋಷ ಹೂಗಾರ ನಿರೂಪಿಸಿದರು. ಆರ್.ಜಿ. ಶೆಟಗಾರ, ಡಾ. ಶರಣಬಸಪ್ಪ ಹರವಾಳ, ಅಶೋಕ ಘೂಳಿ ಇತರರು ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420