ಕಲಬುರಗಿ: ಶಾಶ್ವತವಾಗಿ ಕುಡಿಯುವ ನೀರು ಪೂರೈಕೆಗೆ ಆಗ್ರಹ

0
52

ಕಲಬುರಗಿ: ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕಳೆದ ವರ್ಷ ಮಳೆ ಅಭಾವದಿಂದ ಈಗಾಗಲೇ ಕಲಬುರಗಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ.ಅದರಂತೆ ಮಹಾನಗರ ವ್ಯಾಪ್ತಿಗೆ ಬರುವ ವಾರ್ಡ್ ಸಂಖ್ಯೆ 48 ರಲ್ಲಿ ಬರುವ ಜಯನಗರ ಸೇರಿದಂತೆ ಸುತ್ತಲಿನ ಬಡಾವಣೆಗಳಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆ.10 ದಿನಕ್ಕೊಮ್ಮೆ ನಲ್ಲಿಗಳಲ್ಲಿ ಕುಡಿಯುವ ನೀರು ಸರಬರಾಜು ಆಗುತ್ತಿದೆ.ಇದರಿಂದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಇದೇ ರೀತಿ ಬಿದ್ದಾಪೂರ ಪ್ರದೇಶದಲ್ಲಿ ಸಮಸ್ಯೆ ಎದುರಾಗಿದೆ.

Contact Your\'s Advertisement; 9902492681

ಮತ್ತೊಂದು ಕಡೆ ಕಪನೂರ ಎಸ್ ಸಿ ಬಡಾವಣೆಯಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ.ದಿನ ನಿತ್ಯ ಕುಡಿಯುವ ನೀರಿಗಾಗಿ ಇಲ್ಲಿನ ಜನರು ಪರದಾಡುತ್ತಿದ್ದಾರೆ.

ಸರಿಯಾದ ನೀರು ಸರಬರಾಜು ಇಲ್ಲದೆ ಇರುವುದು ಇದಕ್ಕೆ ಕಾರಣವೂ ಹೌದು.ಮೇಲಿಂದ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗದೆ ಇರುವುದರಿಂದ ಇಲ್ಲಿನ ಕೊಳವೆ ಬಾವಿಗಳು ಬತ್ತಿ ಹೋಗಿವೆ.ನಲ್ಲಿಗಳಲ್ಲಿ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ.ಈ ಕುರಿತು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.ಯಾವೊಬ್ಬ ಪಾಲಿಕೆ ಸದಸ್ಯರು ಜನರಿಗೆ ಸ್ಪಂದಿಸುತ್ತಿಲ್ಲ.ತಾವು ಕೂಡಲೇ ನೀರು ಸರಬರಾಜು ಮಾಡಲು ಮಹಾನಗರ ಪಾಲಿಕೆಗೆ ಸೂಚಿಸಬೇಕು ಎಂದು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಒತ್ತಾಯಿಸಿದರು.

ಕುಡಿಯುವ ನೀರಿನ ನಿರ್ವಹಣೆ ಈಗಾಗಲೇ ಸರ್ಕಾರ ಎಲ್ ಆಂಡ ಟಿ ಕಂಪನಿಗೆ ವಹಿಸಿರುವುದು ದುರದೃಷ್ಟಕರ.ಎಕೆಂದರೆ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ.ಜನರಿಂದ ಕೇವಲ ಬಾಕಿ ಇರುವ ಬಿಲ್ ಗಳ ವಸೂಲಿ ಮಾಡುತ್ತಿದ್ದಾರೆ.ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ.ಆದ್ದರಿಂದ ತಾವು ಗಮನ ಹರಿಸಿ ಕೂಡಲೇ ಈ ಬಡಾವಣೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು.ಒಂದು ವಾರದೊಳಗೆ ಕೆಟ್ಟು ಹೋಗಿರುವ ಕೊಳವೆ ಬಾವಿಗಳನ್ನು ಸರಿಪಡಿಸಬೇಕು.ಇಲ್ಲ ದಿದ್ದಲ್ಲಿ ಬಡಾವಣೆಯ ಜನರೊಂದಿಗೆ ಕನ್ನಡ ಭೂಮಿ ಜಾಗೃತಿ ಸಮಿತಿ ಬೀದಿಗಿಳಿದು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ,ನಗರಾಧ್ಯಕ್ಷ ಪರಮೇಶ್ವರ ಹಡಪದ, ವಕ್ತಾರರಾದ ಆನಂದ ಕಪನೂರ, ರಾಜ್ಯ ಕಾರ್ಯದರ್ಶಿ ಗುರುಲಿಂಗಪ್ಪ ಟೆಂಗಳಿ,ನಗರ ಕಾರ್ಯದರ್ಶಿ ಅಮೀತ್ ನಾಗನಹಳ್ಳಿ,ಗುರು ಮುಕ್ರಂಬಿ,ಸಿದ್ದಲಿಂಗ ಗುಬ್ಬಿ,ಶಿವಕುಮಾರ ಪಾಟೀಲ,ಮಲ್ಲಯ್ಯ ಸ್ವಾಮಿ ಗಂಗಾಧರಮಠ,ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here