ಕಲಬುರಗಿ ಮೂರಾರ್ಜಿ ದೇಸಾಯಿ ವಸತಿ ಕಾಲೇಜು; ಪಿಯುಸಿ ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

0
176

ಕಲಬುರಗಿ; ಜಿಲ್ಲೆಯ ಈ ಕೆಳಕಂಡ ಮೂರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಹಾಗೂ ಏಕಲವ್ಯ ಮಾದರಿ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪಿ.ಯು.ಸಿ. ಪ್ರಥಮ ವರ್ಷದ ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪೂರ ಮೂರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವಿಜ್ಞಾನ ವಸತಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ನಾಗಾವಿ ಮತ್ತು ಗುಂಡಗುರ್ತಿ ಹಾಗೂ ಅಫಜಲಪುರ ತಾಲೂಕಿನ ಅರ್ಜುಣಗಿಯಲ್ಲಿರುವ ಮೂರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಹಾಗೂ ಚಿತ್ತಾಪುರ ತಾಲೂಕಿನ ಕೊಂಚೂರು ಏಕಲವ್ಯ ಮಾದರಿ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 2024ರ ಮೇ 25 ಇರುತ್ತದೆ. ಈ ಮೂರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನಲ್ಲಿ ಊಟ, ವಸತಿ, ಪಠ್ಯ ಪುಸ್ತಕ ಜೊತೆಗೆ ಸಿ.ಇ.ಟಿ., ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂದ ವಸತಿ ವಿಜ್ಞಾನ ಕಾಲೇಜಿನ್ನು ಹಾಗೂ ಮೊಬೈಲ್ ಸಂಖ್ಯೆ 9964149388, 9483408131 ಹಾಗೂ 6363734302 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here