ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಶ್ವ ಪ್ರಕಾಶನದ ಸಹಯೋಗದೊಂದಿಗೆ ನಿವೃತ್ತ ಪ್ರಾಧ್ಯಾಪಕರೂ ಆದ ಹಿರಿಯ ಕಥೆಗಾರ ಪ್ರೊ. ಕೆ.ಎಸ್. ನಾಯಕ ಅವರ ಆತ್ಮ ಕಥನ ವಲಸೆ ಹಕ್ಕಿಯ ಹಾಡು ಎಂಬ ಕೃತಿ ಲೋಕಾರ್ಪಣೆ ಸಮಾರಂಭವನ್ನು ಮೇ 19 ರ ಬೆಳಗ್ಗೆ 10.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಪ್ರೊ. ಕೆ ಎಸ್ ನಾಯಕ ಅವರು ತಮ್ಮ ಆತ್ಮಕಥನದಲ್ಲಿ ತಾವು ತಮ್ಮ ಪ್ರಾಯದಲ್ಲಿ ಕಂಡ ಪ್ರೀತಿ, ಪ್ರೇಮ, ವಿಪ್ರಲಂಭ ಶೃಂಗಾರವು ಮನೋಹರವಾಗಿ ಚಿತ್ರಿತಗೊಳಿಸಿದ್ದಾರೆ.
ಪ್ರೊ. ಕೆ ಎಸ್ ನಾಯಕ ಅವರು ಸಾಂಪ್ರದಾಯಕ ಸಮಾಜದಲ್ಲಿ ಹುಟ್ಟಿ ಬಂದಿದ್ದರೂ ಸನಾತನವಾಗಿ ಬಂದಿರುವ ಕುರುಡು ಸಂಪ್ರದಾಯಗಳ ವಿರುದ್ಧ ದನಿ ಎತ್ತಿದ್ದಾರೆ. ಸಮಾಜದಲ್ಲಿನ ಅಂಧಶ್ರದ್ಧೆ, ಮೌಢ್ಯಾಚರಣೆಗಳಿಗೆ ಒಳಗಾಗಿ ಪೂಜೆ, ಹರಕೆ, ಬಲಿಗಳನ್ನು ಅರ್ಪಿಸುತ್ತಿರುವುದನ್ನು ಖಂಡಿಸುವುದರ ಮೂಲಕ ವೈಚಾರಿಕ ಮನೋಭಾವವನ್ನು ಬೆಳೆಸಿಕೊಂಡು ಅಂಧ ಆಚರಣೆಗಳಿಂದ ಹೊರ ಬರಲು ತಮ್ಮ ಅನೇಕ ಬರಹಗಳÀ ಮೂಲಕ ಕರೆ ನೀಡಿರುತ್ತಾರೆ. ಅವರ ಈ ಆತ್ಮಕಥನ ಕೃತಿ ಇಂದಿನ ಸಮಾಜಕ್ಕೆ ಪ್ರೇರಣೆ ನೀಡಲಿದೆ ಎಂದು ಅವರು ವಿವರಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ರಾಜ್ಯಾಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಕೃತಿ ಲೋಕಾರ್ಪಣೆಗೊಳಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಕ್ರಮ್ ವಿಸಾಜಿ ಕೃತಿ ಪರಿಚಯ ಮಾಡಲಿದ್ದು, ಶರಣಬಸವೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿವರಾಜ ಶಾಸತ್ರೀ ಹೇರೂರ, ಲೇಖಕಿ ಪ್ರಮೀಳಾ ಜಾನಪ್ಪಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೃತಿ ಲೇಖಕ ಪ್ರೊ. ಕೆ.ಎಸ್. ನಾಯಕ್, ಸಾಹಿತಿ ಸಿ.ಎಸ್.ಆನಂದ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…