ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ; ಕ್ರಾಂತಿ

0
44

ಸುರಪುರ: ಈ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು ಶಿಕ್ಷಣದ ಗುಣಮಟ್ಟ ಕುಸಿತವಾಗಿದ್ದು ಇದಕ್ಕೆ ಪ್ರಮುಖವಾಗಿ ಜಿಲ್ಲೆಯಾದ್ಯಂತ ಸರಕಾರಿ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಹಾಗೂ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲದೇ ಇರುವುದು ಪ್ರಮುಖ ಕಾರಣವಾಗಿದೆ ಕೂಡಲೇ ಜಿಲ್ಲೆಯ ಸರಕಾರಿ ಶಾಲೆಗಳು ಹಾಗೂ ಎಲ್ಲಾ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಒತ್ತಾಯಿಸಿ ಇಂದು(ಮೇ17ರಂದು) ನಗರದ ಗಾಂಧಿವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿಸ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹಾಗೂ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ ಶೆಳ್ಳಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here