ಕಲಬುರಗಿ: ಕಳೆದ 11 ತಿಂಗಳಲ್ಲಿ ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿರುವುದು ಕಂಡುಬರುತ್ತಿದೆ. ರಾಜ್ಯ ಸರಕಾರವು ಜನರನ್ನು ಭಯದ ವಾತಾವರಣದಲ್ಲಿ ಬದುಕುವ ದಾರುಣ ಸ್ಥಿತಿಗೆ ತಲುಪಿಸಿದೆ ಎಂದು ಭಾರತೀಯ ಜನತಾ ಪಕ್ಷ ವೈದ್ಯಕೀಯ ಪ್ರಕೋಷ್ಠ ಬಿಜೆಪಿ ರಾಜ್ಯ ಮಾಧ್ಯಮ ಪ್ಯಾನೆಲಿಸ್ಟ್‍ನ್ ಡಾ. ಸುಧಾ ಹಾಲಕಾಯಿ ಹೇಳಿದರು.
ಪದೇಪದೇ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬರುತ್ತಿದೆ, ಸರಕಾರದ ಅಸಮರ್ಥ ಆಡಳಿತ ಮತ್ತು ಕಾನೂನು ಸುವ್ಯವಸ್ಥೆಯನ್ನು ಹೇಗೆ ಹತೋಟಿಗೆ ತರಬೇಕೆಂಬ ಸಾಮಥ್ರ್ಯವೇ ಇಲ್ಲದ ಗೃಹ ಸಚಿವರು ಇದ್ದಾರೆ. ಪರಿಸ್ಥಿತಿಯನ್ನು ಅವಲೋಕನ ಮಾಡಲೂ ಅಸಮರ್ಥವಾಗಿರುವ ರಾಜ್ಯ ಸರಕಾರ ಇರುವ ಕಾರಣಕ್ಕೋಸ್ಕರ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಕಂಡುಬರುತ್ತಿದೆ. ಪ್ರತಿಯೊಂದು ವಿಚಾರದಲ್ಲೂ ರಾಜಕೀಯ ಲಾಭದ ಹುನ್ನಾರ, ಮತಬ್ಯಾಂಕ್ ಸಂರಕ್ಷಣೆಯ ಕಾರಣಕ್ಕೆ ಹಿಂದೆ ಕಾನೂನು- ಸುವ್ಯವಸ್ಥೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ರಾಜ್ಯವು ಇವತ್ತು ಗೂಂಡಾ ರಾಜ್ಯವಾಗಿ ಮತ್ತು ಕೊಲೆಗಡುಕರ ರಾಜ್ಯವಾಗಿ ಪರಿವರ್ತನೆಗೊಂಡಿದೆ ಎಂದು ಕೀಡಿಕಾರಿದ್ದಾರೆ.
ಒಂದು ಅಂಕಿ ಅಂಶದ ಪ್ರಕಾರ, ಸಿಟಿ ಕ್ರೈಮ್ ಬ್ಯೂರೋ ಮತ್ತು ನ್ಯಾಷನಲ್ ಕ್ರೈಮ್ ಬ್ಯೂರೋ ಪ್ರಕಾರ ಕಳೆದ 11 ತಿಂಗಳಲ್ಲಿ ಶೇ 60ಕ್ಕಿಂತ ಹೆಚ್ಚು ಈ ಥರ ಕ್ರಿಮಿನಲ್ ಚಟುವಟಿಕೆ ಜಾಸ್ತಿ ಆಗಿರುವುದು ಕಂಡುಬಂದಿದೆ. ವಿಶೇಷವಾಗಿ ಮಹಿಳೆಯರ ಮೇಲಿನ ಅಮಾನುಷ ಕೃತ್ಯಗಳು ಜಾಸ್ತಿಯಾಗಿವೆ, ಇದಕ್ಕೆ ರಾಜ್ಯ ಸರಕಾರವೇ ಪೂರ್ಣ ಕಾರಣ. ರಾಜ್ಯ ಸರಕಾರವು ದೃಢ ನಿರ್ಧಾರ ತೆಗೆದುಕೊಳ್ಳದ ಕಾರಣ ಪದೇಪದೇ ಇಂಥ ದುರ್ಘಟನೆಗಳು ಹೆಚ್ಚಾಗಿವೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿಯ ಅಂಜಲಿಯ ಹತ್ಯಾ ಪ್ರಕರಣ, ಅದಕ್ಕೂ ಮೊದಲು ನೇಹಾ ಪ್ರಕರಣ, ಬೆಳಗಾವಿಯಲ್ಲಿ ನಡೆದ ದಲಿತ ಮಹಿಳೆಯ ವಿವಸ್ತ್ರಗೊಳಿಸಿದ ಅಮಾನವೀಯ ಘಟನೆ, ರೊಟ್ಟಿ ಕೇಳಿದ ದಲಿತ ಯುವಕನ ಹತ್ಯೆ. ಒಂದು ಕಡೆ ಮತಾಂಧ ಶಕ್ತಿಗಳು ಸ್ವಚ್ಛಂದವಾಗಿ ವಿಜೃಂಭಿಸುತ್ತಿದ್ದರೆ ಇನ್ನೊಂದು ಕಡೆ ಕೊಲೆಗಡುಕರು, ಗೂಂಡಾ ರಾಜ್ಯವಾಗಿ ಕರ್ನಾಟಕ ಪರಿವರ್ತನೆಗೊಂಡಿದೆ. ಕಾಂಗ್ರೆಸ್ ಪಕ್ಷದ ಕೈಯಲ್ಲಿ ರಾಜ್ಯ ಸುರಕ್ಷಿತವಾಗಿಲ್ಲ. ಕರ್ನಾಟಕವು ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಒಬ್ಬ ಅಸಮರ್ಥ ರಾಜ್ಯದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಇದು ಕಾರ್ಯರೂಪಕ್ಕೆ ಬರಲೇಬೇಕು ಎಂದು ಡಾ. ಸುಧಾ ಹಾಲಕಾಯಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…