ವಿಶ್ವ ಪರಿಸರ ದಿನ ಅಂಗವಾಗಿ ಪ್ರಬಂಧ ಸ್ಪರ್ಧೆ

ಬೆಂಗಳೂರು; ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಪ್ರಬಂಧವು 1000 ಪದಗಳನ್ನು ಮೀರಬಾರದು ಮತ್ತು ಇಂಗ್ಲಿμï ನಲ್ಲಿ ಏರಿಯಾಲ್ ಪಾಂಟ್ ಗಾತ್ರ 14 ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ 12 ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು.

ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿμïನಲ್ಲಿ ಸಲ್ಲಿಸಬಹುದು. ಪ್ರತಿ ಭಾμÉಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾμÉಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿದೆ.

ಆಯ್ಕೆಯಾಗುವ ಮೊದಲ ಮೂರು ಸ್ಥಾನ ಪಡೆದ ಪ್ರಬಂಧಗಳಿಗೆ ಪ್ರಥಮ ರೂ. 5000/-, ದ್ವಿತೀಯ ರೂ. 3000/- ಹಾಗೂ ತೃತೀಯ ರೂ. 2000/- ನಗದು ಬಹುಮಾನಗಳನ್ನು ನೀಡಲಾಗುವುದು. ಇಂಗ್ಲಿμï ಮತ್ತು ಕನ್ನಡ ಪ್ರಬಂಧಗಳಿಗೆ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯ ವಿಜೇತರನ್ನು ಇ-ಮೇಲ್ ಮೂಲಕ ಸಂಪರ್ಕಿಸಲಾಗುತ್ತದೆ.

ಎಲ್ಲಾ ಪ್ರಬಂಧಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿ ಒಡೆತನಕ್ಕೆ ಒಳಗೊಂಡಿರುತ್ತವೆ ಹಾಗೂ ಪ್ರಬಂಧಗಳನ್ನು ಯಾವುದೇ ಉದ್ದೇಶಕ್ಕಾಗಿ ಯಾವುದೇ ಮಾಧ್ಯಮದಲ್ಲಿ ಬಳಸುವ, ಪುನರುತ್ಪಾದಿಸುವ, ಪ್ರಕಟಿಸುವ, ಪ್ರಸಾರ ಮಾಡುವ ಅಥವಾ ಇತರ ರೀತಿಯಲ್ಲಿ ಸಂವಹನ ನಡೆಸುವ ಹಕ್ಕನ್ನು ಹೊಂದಿರುತ್ತದೆ.

ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದಂತೆ ಯಾವುದೇ ವಿಚಾರಣೆಯನ್ನು ಪುರಸ್ಕರಿಸಲಾಗುವುದಿಲ್ಲ. ಅಗತ್ಯವಿದ್ದರೆ ಮೇಲಿನ ನಿಯಮಗಳಿಗೆ ತಿದ್ದುಪಡಿಗಳನ್ನು ತರಲು ಮತ್ತು ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡುವ ಅಂತಿಮ ಹಕ್ಕನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಹೊಂದಿರುತ್ತದೆ.

ಪ್ರಬಂಧದ ಹಾರ್ಡ್ ಕಾಪಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪೆÇ್ರ.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೆÇೀಸ್ಟ್, ಯಲಹಂಕ, ಬೆಂಗಳೂರು- 560 097 ಕ್ಕೆ ಅಂಚೆ ಮೂಲಕ ಮತ್ತು ಪಿಡಿಎಫ್ ಪ್ರತಿಯನ್ನು ಅಕಾಡೆಮಿಯ ಇ—ಮೇಲ್ essಚಿಥಿ.ಞsಣಚಿ@gmಚಿiಟ.ಛಿom ಗೆ ಕಳುಹಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420