ಚಿತ್ತಾಪುರ : ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು, ಹಾಗೂ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಖರೀದಿ ಕೇಂದ್ರಗಳು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ (ಬಣ) ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ (ಬಣ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟಣದ ಪ್ರಮುಖ ಬೀದಿಗಳಿಂದ ಕರವೇ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ಸಂಚಾರಿಸಿ ತಹಸೀಲ್ ಕಾರ್ಯಾಲಯಕ್ಕೆ ತಲುಪಿ ತಹಸೀಲ್ದಾರ ಮೂಲಕ ಮನವಿ ಪತ್ರ ಸಲ್ಲಿಸಿದರು.ನಂತರ ಕರವೇ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಮಾತನಾಡಿ ಇಷ್ಟು ವರ್ಷದ ಬಳಿಕವೂ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ, ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ರೈತಾಪಿ ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಕೂಡಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದನ್ನು ತಪ್ಪಿಸಲು ಸರಕಾರವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ಸಂದರ್ಭದಲ್ಲಿ ತಾಲೂಕು ಘಟಕದ ಕಾರ್ಯದರ್ಶಿ ಪರಮೇಶ್ವರಿ ಜಳಕಿ, ದಂಡೋತಿ ಗ್ರಾಮ ಘಟಕದ ಅಧ್ಯಕ್ಷ ಸಂತೋಷ್, ಪ್ರಧಾನ ಕಾರ್ಯದರ್ಶಿ ಮಹಾದೇವ ತೆಲುಗುರ, ಶಿವಕುಮಾರ್ ಸುಣಗಾರ , ವೀರೇಂದ್ರ ವಿಶ್ವಕರ್ಮ, ಲಿಂಗ ಬಸವ ಟೆಂಗಳಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…