ಕಲಬುರಗಿ; ಸ್ವಾಭಿಮಾನಿ ಕರ್ನಾಟಕ ವೇದಿಕೆ(ರಿ) ಬೆಂಗಳೂರು ಕೊಡಮಾಡುವ 2023 ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಕಲಬುರಗಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಎಚ್.ಟಿ.ಪೋತೆ ಅವರು ರಚಿಸಿದ ಪ್ರವಾಸ ಕಥನ ‘ಬಾಬಾ ಸಾಹೇಬರ ಲಂಡನ್ ಮನೆಯಲ್ಲಿ’ ಕೃತಿಯು ಆಯ್ಕೆಯಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ದ್ವಾರನಕುಂಟೆ ಪಾತಣ್ಣ ಅವರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಹಾಗೂ ಚಳುವಳಿಯಲ್ಲಿ ಕ್ರಿಯಾಶೀಲವಾಗಿರುವ ಸ್ವಾಭಿಮಾನಿ ಕರ್ನಾಟಕ ವೇದಿಕೆಯ ವತಿಯಿಂದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರದ 2023 ರ ಸಾಲಿನ ಕೃತಿಗಳಲ್ಲಿ ಐದು ವಿವಿಧ ವಿಭಾಗದ ಕೃತಿಗಳನ್ನು ಆಯ್ಕೆ ಮಾಡಿದ್ದು, ಕಥೆ, ಅನುವಾದ, ಕವನ, ಪ್ರವಾಸ, ಲೇಖನ ಹಾಗೂ ವ್ಯಕ್ತಿ ಚಿತ್ರಣ ಕೃತಿಗಳನ್ನು 2023 ರ ಸಾಲಿನ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ತಲಾ 5000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಇದೇ ಮೇ.31 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅಧ್ಯಕ್ಷರಾದ ಪಾತಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.