ಬಿಸಿ ಬಿಸಿ ಸುದ್ದಿ

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಅಭಿಪ್ರಾಯಪಟ್ಟರು.

ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಸನ್ ರೈಸ್ ಆಸ್ಪತ್ರೆ ವತಿಯಿಂದ ನಗರದ ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಬುದ್ಧ, ಬಸವ, ಅಂಬೇಡ್ಕರ್ ರತ್ನ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು.

ಬುದ್ದ, ಬಸವ, ಅಂಬೇಡ್ಕರ್ ಅವರು ನಮ್ಮೊಳಗಿನ ಎಚ್ಚರ. ಸಮಾಜದ ಎಲ್ಲರೂ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನದಿ ಸಿನ್ನೂರ ಮಹಾಲಕ್ಷ್ಮಿ ಶಕ್ತಿ ಪೀಠದ ಗುರುರಾಜೇಂದ್ರ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಪರಿವರ್ತನೆ ಅಗತ್ಯವಾಗಿದ್ದು, ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳಿಂದ ಇದು ಸಾಧ್ಯ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಪ್ರಶಸ್ತಿ ಪ್ರದಾನ ಮಾಡಿದರು. ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಡಾ. ಸುರೇಶ ಎಲ್. ಶರ್ಮಾ ಮಹಾಪುರುಷರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಸನ್ ರೈಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಸಲ್ಮಾನ್ ಪಟೇಲ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಮಂಜುನಾಥ ನಾಲವಾರಕರ, ಚಂದ್ರಿಕಾ ಪರಮೇಶ್ವರಿ, ರವಿ ದೇಗಾಂವ, ಮಲ್ಲಿಕಾರ್ಜುನ ನೀಲೂರ ಇತರರು ವೇದಿಕೆಯಲ್ಲಿದ್ದರು.

ಪ್ರಶಸ್ತಿ ಪ್ರದಾನ: ಡಾ. ಶಿವರಂಜನ ಸತ್ಯಂಪೇಟೆ, ಡಾ. ಪುಟ್ಟಮಣಿ ದೇವಿದಾಸ, ಡಾ. ಅನಿಲ ಟೆಂಗಳಿ, ಶಶಿಕಲಾ ನರೋಣಕರ, ಡಾ. ರಾಜಶೇಖರ ಮಾಂಗ್, ಸಿದ್ಧಾರ್ಥ ಚಿಮ್ಮಾಇದಲಾಯಿ, ಜೈಭೀಮ ಸಾವಳಗಿ, ತಿಪ್ಪಮ್ಮ ಮಾನಕರ್, ಎಚ್.ಬಿ. ಪಾಟೀಲ ಇತರರಿಗೆ ಬುದ್ಧ, ಬಸವ, ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇವೇಳೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಅನುಷ್ಠಾನ ಸಮಿತಿ ಸದಸ್ಯರಾದ ಚಂದ್ರಿಕಾ ಪರಮೇಶ್ವರ, ಧೂಳಪ್ಪ ಕಟ್ಟಿಮನಿ, ರಾಜ್ ತಿಲಕ್ ಉಪಾದ್ಯಾಯ, ಕಲ್ಯಾಣರಾವ ತೊನಸನಳ್ಳಿ, ವಿಜಯಕುಮಾರ ಕಟ್ಟಿಮನಿ ಇವರುಗಳಿಗೆ ಗೌರವ ಸನ್ಮಾನ ಮಾಡಲಾಯಿತು.

ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚಿನ್ ಫರಹತಾಬಾದ್, ಸತೀಶ ಫರಹತಾಬಾದ, ಅಕ್ಷಯ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago