ಬಿಸಿ ಬಿಸಿ ಸುದ್ದಿ

ಸಂವಹನದೊಂದಿಗೆ ಗುಣಮಟ್ಟದ ಕೌಶಲ್ಯ ತರಬೇತಿ ಅಗತ್ಯ

ಕಲಬುರಗಿ : ಪದವಿ ಹಂತದ ವಿದ್ಯಾರ್ಥಿಗಳ ವಿಷಯಗಳಲ್ಲಿನ ಆಸಕ್ತಿ ಮತ್ತು ಕಲಿಕಾ ಸಾಮರ್ಥ್ಯವನ್ನು ಗುರುತಿಸಿ ಉತ್ತಮ ಸಂವಹನದೊಂದಿಗೆ ಗುಣಮಟ್ಟದ ಕೌಶಲ್ಯ ತರಬೇತಿ ನೀಡುವುದು ಅಗತ್ಯ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಥನ ಸಭಾಂಗಣದಲ್ಲಿ “ಕಲಿಕೆ ಜೊತೆಗೆ ಕೌಶಲ್ಯ”ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸ್ನಾತಕ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ರೂಪಿಸಿರುವ ವೃತ್ತಿ ಕೌಶಲ್ಯ ಯೋಜನೆ ನಾಲ್ಕು ವರ್ಷಗಳಲ್ಲಿ ಕಾರ್ಯಗತಗೊಳ್ಳಲಿದೆ.

ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಯೋಜಕರು ವಿದ್ಯಾರ್ಥಿಗಳ ಮಾಹಿತಿಯನ್ನು ಪಾಲುದಾರಿಕೆ ಸಂಸ್ಥೆ ಹಾಗೂ ಕೈಗಾರಿಕೆಗಳಿಗೆ ಒದಗಿಸಬೇಕು. ವಿವಿಧ ಸಂಸ್ಥೆಗಳಿಗೆ ಅಗತ್ಯವಿರುವ ವೃತ್ತಿ ಆಧಾರಿತ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ಸಾಹ ಬೆಳೆಸಬೇಕು. ಆಧುನಿಕ ತಂತ್ರಾಂಶಗಳ ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳ ಡೇಟಾಗಳನ್ನು ಕೈಗಾರಿಕೆಗಳ ಸಹಭಾಗಿದರರಿಗೆ ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕು
ಎಂದರು.

ಕಾಲೇಜು ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿ ಡಾ. ನಾಗೇಶ್ ಆರ್ ಮುಖ್ಯ ಅತಿಥಿಯಾಗಿ ಪ್ರಸ್ತಾವಿಕವಾಗಿ ಮಾತನಾಡಿ ಸ್ನಾತಕ ವಿಷಯಗಳಾದ ಬಿಎ, ಬಿಎಸ್ಸಿ ಮತ್ತು ಬಿಕಾಂ ಆರನೇ ಸೆಮಿಸ್ಟರನಲ್ಲಿ ಆಂತರಿಕ ವೃತ್ತಿ ತರಬೇತಿಯನ್ನು ಅಳವಡಿಸಿದೆ. ಪದವಿಗೆ ಸಂಬಂಧಿತ ಕೌಶಲ್ಯ ತರಬೇತಿಗೆ ಒತ್ತು ನೀಡಲಾಗುತ್ತದೆ, ಮಾರ್ಕೆಟಿನಲ್ಲಿ ಅವಶ್ಯಕವಿರುವ ಹುದ್ದೆಗಳಿಗೆ ತಕ್ಕಂತೆ ಕೌಶಲ್ಯ ಜ್ಞಾನ ವೃದ್ಧಿಸಿಕೊಳ್ಳಬಹುದು. ಇದರ ಜೊತೆಗೆ ಸ್ವಂತ ಬುಸಿನೆಸ್ ಸಹ ಕೈಗೊಳ್ಳಬಹುದು. ವಿವಿಧ ಇಂಡಸ್ಟ್ರಿ ಪಾರ್ಟ್ನರ್ಸ್ ನವರ ಸಹಕಾರದೊಂದಿಗೆ ವಿವಿಧ ಕ್ಷೇತ್ರದ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದರಿಂದ ಕೌಶಲಗಳನ್ನು ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿನ ವಿವಿಧ ಹುದ್ದೆಗಳ ಅವಕಾಶ ಹೆಚ್ಚಾಗುತ್ತದೆ ಎಂದರು.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನ ನಡೆಸಿ ಕೋರ್ಸ್ ಮ್ಯಾಪಿಂಗ್ ಮಾಡಲಾಗುತ್ತದೆ. ಕೋರ್ಸ್ ತರಬೇತಿಗೆ ಥಿಯರಿ ಜೊತೆಗೆ ಪ್ರಾಕ್ಟಿಕಲ್ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವಂತಹ ವಿವಿಧ ಸಾಫ್ಟ ವೇರ್ ತರಬೇತಿ ನೀಡಲಾಗುತ್ತದೆ.

ಈ ಕೌಶಲ್ಯ ಕ್ರೆಡಿಟ್ ಗಳನ್ನು ಹೊಂದಿದ್ದು ಕರಿಕುಲಂ ಅಡಿಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಇದರ ಮಾಹಿತಿಯನ್ನು ಯುಯುಸಿಎಂಎಸ್ ನಲ್ಲಿ ಮ್ಯಾಪ್ ಆಗುತ್ತದೆ. ಈ ಕಲಿಕೆ ಜೊತೆಗೆ ಕೌಶಲ್ಯ ಕಾರ್ಯಕ್ರಮವನ್ನು ಮೊದಲ ಬಾರಿಗೆ ತುಮಕೂರು ದಾವಣಗೆರೆ ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳ ವಿಶ್ವವಿದ್ಯಾಲಯಗಳಲ್ಲಿ ಮೊದಲ ಬಾರಿಗೆ ಅಳವಡಿಸಿಕೊಳ್ಳಲಾಗುತ್ತಿದೆ. ಈ ಬಾರಿ ನಾಲ್ಕು ಜಿಲ್ಲೆಗಳ ಎಲ್ಲಾ ಪ್ರಥಮ ದರ್ಜೆ ಕಾಲೇಜ್ ಗಳು ಒಳಗೊಂಡು 29,000 ವಿದ್ಯಾರ್ಥಿಗಳು ಇದರ ಲಾಭ ಪಡೆಯಲಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 7,200 ವಿದ್ಯಾರ್ಥಿಗಳು ಕೌಶಲ್ಯ ತರಬೇತಿಯ ಲಾಭ ಪಡೆಯಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಯೋಜಕರು ಇಂಡಸ್ಟ್ರಿ ಪಾರ್ಟ್ನರ್ ಜೊತೆಗೆ ಸಂವಹನ ಮಾಡಿ ತಮ್ಮ ಕಾಲೇಜಿನ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಡೇಟಾ ಒದಗಿಸಿಕೊಡಬೇಕು ಎಂದು ವಿವರಿಸಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಗೊಳ್ಳೆ ಶಿವಶರಣ ಬಿ ಮಾತನಾಡಿದರು.

ಕಾರ್ಯಾಗಾರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಾಂಶುಪಾಲರು, ಸಂಯೋಜಕರು, ಕೌಶಲ್ಯ ತರಬೇತಿದಾರರು, ರಾಜ್ಯದ ವಿವಿಧ ಕೈಗರಿಕೊದ್ಯಮಿಗಳು, ಕೈಗಾರಿಕೆಗಳ ಪಾಲುದಾರರು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಯೋಜನೆ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ ಪ್ರೊ. ಆರ್. ಎಲ್. ರಾಯಬಾಗ್ಕರ್, ಕಾಲೇಜು ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿ ಪ್ರೊ. ಮಣಿಕಂದನ್, ಕಾಲೇಜು ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಪ್ರಾದೇಶಿಕ ಕಚೇರಿಯ ವಿಶೇಷಾಧಿಕಾರಿ ಡಾ. ಬಿ. ಸರೋಜಾ ಹಾಗೂ ಡಾ. ಸೂರ್ಯಕಾಂತ್ ಉಮ್ಮಪುರೆ ಉಪಸ್ಥಿತರಿದ್ದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಗ್ರಂಥಪಾಲಕ ಡಾ. ಸುರೇಶ ಜಂಗೆ ವಂದಿಸಿದರು. ಸಂಗೀತ ವಿಭಾಗದ ಕನ್ನಡ ಅಧ್ಯಯನ ಸಂಸ್ಥೆಯ ಅತಿಥಿ ಉಪನ್ಯಾಸಕ ಡಾ. ಎಂ. ಬಿ. ಕಟ್ಟಿ ನಿರೂಪಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago