ಕೊಪ್ಪಳ,: 30 ವರ್ಷಗಳ ಬೇಡಿಕೆಯಾದ ಕುಣಿಕೇರಿಯ ಏತನೀರಾವರಿ ಯೋಜನೆಯು ನಾಳೆ ದಿ :20 ಶುಕ್ರವಾರದಂದು ಬೆಳೆಗ್ಗೆ 10 ಘಂಟೆಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.
ಸಣ್ಣ ನೀರಾವರಿ ಇಲಾಖೆ ಯೋಜನೆ ಅಡಿಯಲ್ಲಿ ರೂ.3 ಕೋಟಿ 50 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಏತನೀರಾವರಿ ಯೋಜನೆಯು ಈ ಭಾಗದ ರೈತರಿಗೆ ಕಾಯಕಲ್ಪವಾಗಿದ್ದು, ಗೊಂಡಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರೈತರಿಂದ ನಾಳೆ ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಕುಣಿಕೇರಿ ಗ್ರಾಮದಲ್ಲಿ ಏರ್ಪಡಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮುಖಂಡರುಗಳು, ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕುರಗೋಡ ರವಿ ಯಾದವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.