ಸುರಪುರ: ತಾಲೂಕಿನ ಕಿರದಳ್ಳಿ ತಾಂಡಾದ ಬಳಿಯಲ್ಲಿ ಎಗ್ಗಿಲ್ಲದೆ ಇಸ್ಪೀಟ್ ಆಟ ನಡೆಯುತ್ತಿದ್ದು ಇದನ್ನು ತಡೆಯುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ತಾಲೂಕು ಪ್ರಧಾನ ಸಂಚಾಲಕ ಶರಣಪ್ಪ ತಳವಾರಗೇರ ಒತ್ತಾಯಿಸಿದ್ದಾರೆ.
ಈ ಕುರಿತು ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕರಿಗೆ ಮನವಿ ಸಲ್ಲಿಸಿರುವ ಅವರು,ಕಿರದಳ್ಳಿ ತಾಂಡಾದಲ್ಲಿನ ಕೆಲ ವ್ಯಕ್ತಿಗಳು ಇಸ್ಪೀಟ್ ಆಟ ಆಡಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ,ಇಸ್ಪೀಟ್ ಆಟದ ಚಟಕ್ಕೆ ಬಿದ್ದಿರುವ ಅನೇಕರು ಮನೆ,ಜಮೀನು ಕಳೆದುಕೊಂಡಿದ್ದಾರೆ,ಅಲ್ಲದೆ ಇದರಿಂದಾಗಿ ಕಳ್ಳತನದಂತ ಘಟನೆಗಳು ಸಂಭವಿಸುತ್ತಿವೆ,ಇದರ ಕುರಿತು ಜನೆವರಿಯಲ್ಲಿಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ,ಇದರಿಂದಾಗಿ ಇಸ್ಪೀಟ್ ಹಾವಳಿ ಮಿತಿಮೀರಿದ್ದು ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಮತ್ತು ಇಸ್ಪೀಟ್ ಆಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಮನವಿಯಲ್ಲಿ ಎಚ್ಚರಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…