ಬಿಸಿ ಬಿಸಿ ಸುದ್ದಿ

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್‌ಎಸ್) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದೆ.

ರಾಜ್ಯದ 223 ತಾಲೂಕುಗಳಲ್ಲಿ ಬರವಿದ್ದು ಜನ-ಜಾನುವಾರುಗಳಿಗೆ ನೀರು, ಮೇವುಗಾಗಿ ಹಾಹಾಕಾರ ಶುರುವಾಗಿದೆ. ಪತ್ರಿಕೆಗಳ ವರದಿಯ ಪ್ರಕಾರ 29 ಜಿಲ್ಲೆಗಳ 149 ತಾಲೂಕುಗಳ 1,920 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೊಳವೆ ಬಾವಿಗಳು ಬತ್ತಿ ಹೋಗಿವೆ. ಕೆರೆಗಳಲ್ಲ್ಲಿ ನೀರಿಲ್ಲ. ಜಿಲ್ಲಾಡಳಿತದಿಂದ ನೀರಿನ ಸರಬರಾಜು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಟೀಕಿಸಿದೆ.

ಕಳೆದ ವರ್ಷವೂ ಕೂಡ ಸರಿಯಾದ ಬೆಳೆಯಾಗದೇ ರೈತರಿಗೆ ಮೇವು ಸಂಗ್ರಹಿಸಿಕೊಳ್ಳಲೂ ಸಾಧ್ಯವಾಗಿಲ್ಲ. ಮೇವಿನ ಲಭ್ಯತೆಯ ಕೊರತೆಯ ಜೊತೆಗೆ ವಿಪರೀತ ಬೆಲೆಯಾಗುತ್ತಿದೆ. ಇದರಿಂದ ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟವಾಗಿದೆ. ಮೇವಿನ ಅಭಾವಕ್ಕೆ ಹೋಲಿಸಿಕೊಂಡರೆ ಮೇವು ಬ್ಯಾಂಕುಗಳು ಅಗತ್ಯವಿರುವಷ್ಟಿಲ್ಲ. ಜೊತೆಗೆ ರೈತರಿಗೆ ಸರಿಯಾಗಿ ವಿತರಣೆಯಾಗುತ್ತಿಲ್ಲ. ಜಾನುವಾರುಗಳಿಗೆ ಪಶು ಆಹಾರ ನೀಡುವುದಕ್ಕೂ ಹಣಕಾಸಿನ ತೊಂದರೆಯಿದೆ. ಬರವಿರುವುದರಿAದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕೆಲಸಗಳು ನಡೆಯುತ್ತಿಲ್ಲ. ಆದ್ದರಿಂದ ಕೃಷಿ ಕಾರ್ಮಿಕರು ಮತ್ತು ಕೃಷಿ ಚಟುವಟಿಕೆಗಳನ್ನು ನೆಚ್ಚಿಕೊಂಡಿರುವವರಿಗೆ ಉದ್ಯೋಗವಿಲ್ಲದೆ ಊರೂರು ಅಲೆಯುವ, ಗುಳೆ ಹೋಗುವ ಪ್ರಮೇಯ ಬಂದಿದೆ. ನರೆಗಾ ಯೋಜನೆಯಡಿ ಉದ್ಯೋಗ ಒದಗಿಸುವುದರಲ್ಲಿ ಮತ್ತು ಹಣ ಬಿಡುಗಡೆ ಮಾಡುವುದರಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಆದಾಯವಿಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಒಂದು ಕಡೆ, ನೀರು, ಮೇವಿನ ಸಮಸ್ಯೆಯಾದರೆ, ಇನ್ನೊಂದು ಕಡೆ ಕೊಳವೆ ಬಾವಿಗಳು ಬತ್ತಿಹೋಗಿರುವುದರಿಂದ ರೈತರು ತಮ್ಮ ತೋಟದ ಬೆಳೆಗಳನ್ನು ಕಾಪಾಡಿಕೊಳ್ಳುವುದರಲ್ಲಿ ಹೈರಾಣಾಗಿದ್ದಾರೆ. ಕೊಳವೆ ಬಾವಿ ಕೊರೆಯುವ ಏಜೆನ್ಸಿಗಳು ದುರಿತ ಸಮಯದ ಲಾಭ ಪಡೆದುಕೊಳ್ಳಲು ಕೊಳವೆ ಬಾವಿ ಕೊರೆಯುವ ದರಗಳನ್ನು ಎರಿಸಿ ಉರಿಯುವ ಗಾಯಕ್ಕೆ ಉಪ್ಪು ಸವರಿದ್ದಾರೆ. ಒಂದು ಕೊಳವೆ ಬಾವಿಗೆ ಹಲವು ಲಕ್ಷ ಖರ್ಚು ಮಾಡಬೇಕು ಮತ್ತು ನೀರು ಬರುತ್ತದೆಯೆಂಬ ಖಚಿತತೆಯೂ ಇಲ್ಲ. ಎಷ್ಟೋ ಕಡೆ ರೈತರು ಸಾವಿರಾರು ರೂ ಖರ್ಚು ಮಾಡಿ ಟ್ಯಾಂಕರ್‌ಗಳಿAದ ತೋಟಕ್ಕೆ ನೀರು ಹಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ರೈತರು ಬೆಳೆಹಾನಿ, ಆದಾಯ ಕಡಿತ, ನಿರುದ್ಯೋಗ, ಒಟ್ಟಾರೆ ಬರಗಾಲದಲ್ಲಿರುವಾಗ ಮೈಕ್ರೊ ಫೈನಾನ್ಸ್ನವರು ಸಾಲ ವಸೂಲಾತಿಗೆ ನಿಂತಿರುವುದು ಅತ್ಯಂತ ಖಂಡನೀಯ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಮನೆ ನಡೆಸಿಕೊಂಡು ಹೋಗಲು ಮತ್ತು ಕೃಷಿ ಕೆಲಸಗಳಿಗಾಗಿ ಗ್ರಾಮೀಣ ಜನರು ಮುಖ್ಯವಾಗಿ ರೈತ ಮಹಿಳೆಯರು ವಿಶೇಷವಾಗಿ ಮೈಕ್ರೊ ಫೈನಾನ್ಸ್ನವರಿಂದ ಸಾಲ ತೆಗೆದುಕೊಳ್ಳುತ್ತಾರೆ. ಮೈಕ್ರೊ ಫೈನಾನ್ಸ್ವನರು ವಿಪರೀತ ಬಡ್ಡಿಯ ಜೊತೆ ಅಪಮಾನಕಾರಿ ರೀತಿಯಲ್ಲಿ ಸಾಲ ವಸೂಲಾತಿಗೆ ಇಳಿದಿರುವುದರಿಂದ ಅಪಮಾನ ತಾಳಲಾಗದ ರೈತರು, ಮುಖ್ಯವಾಗಿ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ದುರಿದ್ದಾರೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರ ಪರಿಹಾರ ಹಣದ ಬಿಡುಗಡೆ ವಿಷಯದಲ್ಲಿ ಪರಸ್ಪರ ದೋಷಾರೋಪ ಮಾಡಿಕೊಂಡು ಚುನಾವಣಾ ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ. ಇವರ ಮಧ್ಯೆ ರೈತರು ಸತ್ತು ಸುಣ್ಣವಾಗುತ್ತಿದ್ದಾರೆ. ಇದಂತೂ ಅಕ್ಷಮ್ಯ ಮತ್ತು ಅಮಾನವೀಯ. ಆದ್ದರಿಂದ ಬರದಿಂದ ಮುಖ್ಯವಾಗಿ ರೈತ ಸಮುದಾಯವನ್ನು ಕಾಪಾಡಲು ಕೆಳಗಿನ ಕ್ರಮಗಳನ್ನು ಕೂಡಲೇ ತೆಗೆದುಕೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ AIKKMS ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕಾಮ್ರೇಡ್ ಬಿ ಭಗವಾನ್ ರೆಡ್ಡಿ ಅವರು ಉಪಸ್ಥಿತರಿದ್ದರು. ಇವರೊಂದಿಗೆ ಜಿಲ್ಲಾಧ್ಯಕ್ಷರಾದ ಗಣಪತ್ ರಾವ್ ಕೆ ಮಾನೆ, ಜಿಲ್ಲಾ ಉಪಾಧ್ಯಕ್ಷರಾದ ವಿಶ್ವನಾಥ್ ಸಿಂಗ್ ಸದಸ್ಯರಾದ ಹರೀಶ್ ಸಂಗಾಣಿ, ಭೀಮಶಂಕರ ಆಂದೋಲ, ಗುಂಡೇರಾಯ್ ಪಾಟೀಲ್, ಶರಣಬಸಪ್ಪ ಬಾಬನಗೋಳ್, ಅಮೃತ್ ಚೌಹಾನ್ ರವರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

58 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

11 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago