ಬಿಸಿ ಬಿಸಿ ಸುದ್ದಿ

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಸೇರಿದಂತೆ ಭೋದನಾ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಹೆಸರಿನಲ್ಲಿ ಹಣ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಸೋಮವಾರದಂದು ಎಸ್ಎಫ್ಐ ನೇತೃತ್ವದ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ತರಗತಿಯ ಪ್ರವೇಶಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಪಾಲಕರಿಂದ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದು ಏಕೆ ಎಂದು ಎಸ್ಎಫ್ಐ ನಿಯೋಗ ಪ್ರಶ್ನೆ ಮಾಡಿದೆ.

ಸರ್ಕಾರದ 1983 ಶಿಕ್ಷಣ ಕಾಯ್ದೆಯನ್ನು ಉಲ್ಲಂಘನೆ ಮಾಡಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಟ್ಟೆ, ಶೂ ಸಾಕ್ಸ್, ನೋಟ್ ಬುಕ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ ಹಾಗೂ ಶಿಕ್ಷಣ ಇಲಾಖೆಯ 1983 ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

2024-25 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನ ಶುಲ್ಕ ಮಾತ್ರ ತೆಗೆದುಕೊಳ್ಳಲು ಆದೇಶ ಮಾಡಿ ಯಾವುದೇ ಕಾರಣಕ್ಕೂ ಆನ್ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ. 1983ರ ಶಿಕ್ಷಣ ಕಾಯಿದೆ ಪ್ರಕಾರ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ತಮ್ಮ ಶಾಲೆಯ ನೋಟಿಸ್ ಬೋರ್ಡ್ಗೆ ಹಾಕಬೇಕು, ಮತ್ತು ರೋಸ್ಟರ್ ನಿಯಮ ಜಾರಿ ಮಾಡಿ, ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಹಾಕಬೇಕೆಂದು ನಿಯಮ ಇದ್ದರು ರಾಜ್ಯದಲ್ಲಿ ಯಾವ ಶಾಲೆಗಳು ಸಹ ಜಾರಿಮಾಡಿರುವುದಿಲ್ಲ.

ಈ ಕುರಿತು ಅನೇಕ ಬಾರಿ ವಿವಿಧ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಡಿಡಿಪಿಐ, ಬಿಇಒ ರವರಿಗೆ ನಮ್ಮ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿದರು ಕ್ರಮ ಜರುಗಿಸಲು ಮುಂದಾಗಿಲ್ಲ. ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಹಿಂದೇಟು ಹಾಕುವುದು ಯಾಕೆ? ಖಾಸಗಿ ಶಾಲೆಗಳ ಜೊತೆ ನಿಮ್ಮ ಇಲಾಖೆಯ ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಬರುತ್ತದೆ ಎಂದು ಎಸ್ಎಫ್ಐ ಆರೋಪಿಸಿದೆ.

ಆದ್ದರಿಂದ ಕೂಡಲೇ ಅಂತಹ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಸೂಚನೆ ಕೊಡಿ ಹಾಗೂ ನಮ್ಮ ಸಂಘಟನೆಯ ಮುಖಂಡರನ್ನು ಒಳಗೊಂಡಂತೆ ಜಂಟಿ ಸಭೆ ಮಾಡಿ. ಕೆಲವು ಖಾಸಗಿ ಕಾಯ್ದೆ ಉಲ್ಲಂಘನೆ ಮಾಡಿ ಮಕ್ಕಳಿಗೆ ಪ್ರವೇಶ ಕೊಡಲು ಪ್ರವೇಶ ಪರೀಕ್ಷೆ ಮಾಡುತ್ತರಿವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಂಘಟನೆ ತೀವ್ರವಾಗಿ ಖಂಡಿಸುತ್ತದೆ.

ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಮಾನ್ಯ ಆಯುಕ್ತರು ಹಾಗೂ ಎಸ್ಎಫ್ಐ ಸಂಘಟನೆ ಮುಂಖಡರು ಜೊತೆಗೆ ಜಂಟಿ ಸಭೆ ಮಾಡಬೇಕು. ವಿವಿಧ ಜಿಲ್ಲೆಗಳಲ್ಲಿರುವ ಡಿಡಿಪಿಐ, ಹಾಗು ಬಿಇಒ ಗಳಿಗೆ ಆದೇಶ ಮಾಡಿ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ರಾಜ್ಯ ಸಮಿತಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ್, ಕಾರ್ಯದರ್ಶಿ ಭೀಮನಗೌಡ ರಾಜ್ಯ ಪದಾಧಿಕಾರಿಗಳಾದ ಶಿವಕುಮಾರ್ ಮ್ಯಗಳಮನಿ, ರಮೇಶ ವೀರಾಪೂರು, ಶಿವಪ್ಪ , ವಿಶ್ವ ಅಂಗಡಿ, ಚಿದಾನಂದ, ಬಾಬು ಇದ್ದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

4 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

4 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

4 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

15 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

15 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

15 hours ago