ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರಿಂದ ಸಂತಾಪ

0
36

ಕಲಬುರಗಿ: ನಿನ್ನೆ ರಾತ್ರಿ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ‌ ಲೋಕಸಭಾ ಸದಸ್ಯರಾದ ಇಕ್ಬಾಲ್ ಅಹಮದ್ ಸರಡಗಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಿರಿಯ ಮುಖಂಡರಾದ ರಾಧಾಕೃಷ್ಣ ದೊಡ್ಡಮನಿ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸರಡಗಿ ಅವರು ಎರಡು ಬಾರಿ ಸಂಸದರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಆಪ್ತರಾಗಿ ಗುರುತಸಿಕೊಂಡಿದ್ದ ಅವರು ಸ್ನೇಹಜೀವಿ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಅವರಲ್ಲಿದ್ದ ಜನಪರ ಕಾಳಜಿ ಅನುಕರಣೀಯ.

ಸರಡಗಿ ಅವರ ನಿಧನದಿಂದ ಕಾಂಗ್ರೆಸ್ಸಿನ ನಿಷ್ಠಾವಂತ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರು ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here