ಬಿಸಿ ಬಿಸಿ ಸುದ್ದಿ

ಎಂ.ಸಿ.ಸಿ. ಕಟ್ಟುನಿಟ್ಟಾಗಿ ಪಾಲಿಸುವಂತೆ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸ್ಫರ್ಧಾ ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳು ಮಾದರಿ ನೀತಿ ಸಂಹಿತೆ ಕಟ್ಟುನಿಟಾಗಿ ಪಾಲಿಸಬೇಕೆಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಅಭ್ಯರ್ಥಿಗಳಿಗೆ ಸೂಚಿಸಿದರು.

ಗುರುವಾರ ಚುನಾವಣೆ ಸಂಬಂಧ ಅಭ್ಯರ್ಥಿಗಳ ಸಭೆ ನಡೆಸಿದ ಅವರು, ಎಂ.ಸಿ.ಸಿ. ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಅವರನ್ನು ಎಂ.ಸಿ.ಸಿ. ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅಭ್ಯರ್ಥಿ ಮತ್ತು ಚುನಾವಣಾ ಏಜೆಂಟ್ ಅವರ ಕ್ಷೇತ್ರ ವ್ಯಾಪ್ತಿ ಓಡಾಟಕ್ಕೆ ವಾಹನ ಪರವಾನಿಗೆ ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಲಾಗುವುದು. ಇನ್ನೂ ಹೆಚ್ಚಿನ ವಾಹನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವಂತೆ ತಿಳಿಸಿದರು.

ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದು, ಮತದಾರರ ಪಟ್ಟಿಯನ್ನು https://www.rcgulbarga.gov.in ನಲ್ಲಿ ಪ್ರಕಟಿಸಿದ್ದು, ಮತದಾರರು ಇದನ್ನು ವೀಕ್ಷಿಸಬಹುದಾಗಿದೆ. ಕಲಬುರಗಿಯಲ್ಲಿ 1 ರಿಂದ 41, ಬೀದರನಲ್ಲಿ 42 ರಿಂದ 64, ಬಳ್ಳಾರಿಯಲ್ಲಿ 65 ರಿಂದ 80, ರಾಯಚೂರಲ್ಲಿ 81 ರಿಂದ 109, ಕೊಪ್ಪಳದಲ್ಲಿ 110 ರಿಂದ 132, ಯಾದಗಿರಿಯಲ್ಲಿ 133 ರಿಂದ 145 ಹಾಗೂ ವಿಜಯ ನಗರ ಜಿಲ್ಲೆಯಲ್ಲಿ 146 ರಿಂದ 160 ಸೇರಿ ಒಟ್ಟಾರೆ 160 ಭಾಗಗಳ ಜೊತೆಗೆ 35 ಹೆಚ್ಚುವರಿ ಮತಗಟ್ಟೆ ಸೇರಿ ಕ್ಷೇತ್ರದಾದ್ಯಂತ 195 ಮತದಾನ ಕೇಂದ್ರ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಮೇಲೆ ಕಿಮಿನಲ್ ಮೊಕದಮ್ಮೆ ಕುರಿತು ಪ್ರಚೂರಪಡಿಸಿ ಚುನಾವಣಾಧಿಕಾರಿಗೆ ಮಾಹಿತಿ ನೀಡಬೇಕು. ಇನ್ನು ಪಾಂಪ್ಲೆಟ್ಸ್, ವಾಟ್ಸ್ಯಾಪ್ ಸಂದೇಶ, ಬ್ಯಾನರ್ ವಿವರಗಳನ್ನು ಎಂ.ಸಿ.ಎಂ.ಸಿ. ಸಮಿತಿಯಿಂದ ಅನುಮೋದನೆ ಪಡೆಯಬೇಕು. ಮತದಾರರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕ್ಯೂ.ಆರ್. ಕೋಡ್ ಹೊಂದಿರುವ ವೋಟರ್ ಸ್ಲಿಪ್ ಮತದಾರರಿಗೆ ವಿತರಿಸಲಾಗುವುದು.

ವೋಟರ್ ಐ.ಡಿ. ಇಲ್ಲದೆ 14 ಪರ್ಯಾಯ ದಾಖಲೆ ತೋರಿಸಿ ಮತ ಚಲಾಯಿಸಬಹುದಾಗಿದೆ. ಎಲ್ಲಾ ಮತದಾನ ಕೇಂದ್ರಗಳಿಗೆ ಮೈಕ್ರೋ ವೀಕ್ಷರನ್ನು ನೇಮಿಸಲಾಗುತ್ತಿದ್ದು, ಅಗತ್ಯವಿರುವ ಕಡೆ ವೆಬ್‍ಕಾಸ್ಟಿಂಗ್ ಸಹ ಮಾಡಲಾಗುತ್ತದೆ. ಇನ್ನೂ ಪೋಲಿಗ್ ಸಿಬ್ಬಂದಿಗಳಿಗೆ ಈಗಾಗಲೆ ಜಿಲ್ಲಾ ಹಂತದಲ್ಲಿ ತರಬೇತಿ ನೀಡಲು ಸೂಚಿಸಿದೆ ಎಂದು ಕೃಷ್ಣ ಭಾಜಪೇಯಿ ತಿಳಿಸಿದರು.

ಗುಲಬರ್ಗಾ ವಿ.ವಿ.ಯಲ್ಲಿ ಮತ ಎಣಿಕೆ: ಗುಲಬರ್ಗಾ ವಿ.ವಿ. ಹೇಮರೆಡ್ಡಿ ಮಲ್ಲಮ್ಮ ಸಂಶೋಧನಾ ಕೇಂದ್ರ ಕಟ್ಟದಲ್ಲಿ ಜೂನ್ 6 ರಂದು ಮತ ಎಣಿಕೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಭ್ಯರ್ಥಿಗಳಿಗೆ ಆರ್.ಸಿ. ಕೃಷ್ಣ ಭಾಜಪೇಯಿ ತಿಳಿಸಿದರು. ಸಭೆಯಲ್ಲಿ ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಸೇರಿದಂತೆ ಅಭ್ಯರ್ಥಿಗಳ ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago