ಬಿಸಿ ಬಿಸಿ ಸುದ್ದಿ

ಮುಖ್ಯಮಂತ್ರಿ ಪತ್ರ ಬರೆದ ತಕ್ಷಣ ಪಾಸ್ ಪೋರ್ಟ ರದ್ದು ಆಗಬೇಕು ಅಂತಲ್ಲ; ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ

ಕಲಬುರಗಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕರ್ನಾಟಕ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಹೇಳಿದರು.

ಗುರುವಾರ ನಗರದಲ್ಲಿ ಈಶಾನ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಿಸಿದ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಬಾರಿ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದು ಆಗಬೇಕು ಅಂತ್ತೇನೂ ಇಲ್ಲ. ಇದನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಪ್ರಜ್ವಲ್ ರೇವಣ್ಣ ಕ್ಲಿಪಿಂಗ್ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21 ರಂದು, ಆದರೆ ಪ್ರಜ್ವಲ್ ಹೋಗಿದ್ದು ಏ.27ಕ್ಕೆ ಹಾಗಾದ್ರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯ್ತಿದ್ರಾ ? ಎಂದು ನಾನು ಕೇಳುವ ಪ್ರಶ್ನೆಗೆ ಸಿದ್ರಾಮಯ್ಯ, ಡಿಕೆ ಶಿವಕುಮಾರ, ಪರಮೇಶ್ವರ ಅವರಿಗೆ ಇದುವರೆಗೂ ಉತ್ತರ ಕೊಡಲು ಆಗುತ್ತಿಲ್ಲ ಎಂದರು.

ಇದು ಅತ್ಯಂತ ಗಂಭೀರ ಪ್ರಕರಣ ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದೆ ಆಗಿದ್ರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ. ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರೊಸೆಸ್ ಇದೆ. ಪಾಸ್ ಪೋರ್ಟ ರದ್ದುಪಡಿಸಲು ಅದರದೇ ಆದ ಪ್ರಕ್ರಿಯೆಗಳಿವೆ ಡಿಪ್ಲೋಮ್ಯಾಟ್ ಪಾಸ್ ಪೋರ್ಟ ರದ್ದತಿಗೆ ನ್ಯಾಯಾಲಯದಲ್ಲಿ ಫೈಲ್ ಮಾಡಲಾಗಿದೆ. ಭಾರತ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ತಯಾರಿದೆ ಎಂದರು.

emedialine

Recent Posts

ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ

ಬೆಂಗಳೂರು; ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006  ರ…

1 hour ago

17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ  ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ…

1 hour ago

ವಿದ್ಯಾರ್ಥಿಗಳಿಗೆ ಕೌಶಲ್ಯದ ಜೊತೆಗೆ ನೈತಿಕ ಮೌಲ್ಯಗಳು ನೀಡುವುದೆ ಜಿಟಿಟಿಸಿ; ಡಾ: ಸುಧಾರಾಣಿ

ಕಲಬುರಗಿ: ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ಕೌಶಲ್ಯ ಮತ್ತು ಬದುಕಿಗೆ ನೈತಿಕ ಶಿಕ್ಷಣ ಹಾಗೂ ಮೌಲ್ಯಗಳನ್ನು ನೀಡುವುದೆ ನಮ್ಮ ಸಂಸ್ಥೆಯ ಮುಖ್ಯ…

2 hours ago

ಗ್ಯಾಸ ಸಿಲಿಂಡರ ಸ್ಫೋಟದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯ

ಕಲಬುರಗಿ:  ನಗರದ ಸಪ್ತಗಿರಿ ಹೊಟೆಲ್‍ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಗಾಯಗೊಂಡಿರುವ ಕಾರ್ಮಿಕರಿಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ…

2 hours ago

ಬಡತನದ ನಿವಾರಣೆಗೆ ಪುಸ್ತಕ ಓದಿ

ಕಲಬುರಗಿ: ನಗರದ ಶ್ರೀ ಮತಿ ಕಸ್ತೂರಿಬಾಯಿ ಪಿ ಬುಳ್ಳಾ ಸ್ಮಾರಕ ಭವನದಲ್ಲಿ ಏರ್ಪಡಿಸಿದ್ದ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ…

2 hours ago