ಬಿಸಿ ಬಿಸಿ ಸುದ್ದಿ

ವಿಶ್ವಗುರು ಬಸವಣ್ಣ ಹೇಮರೆಡ್ಡಿ ಮಲ್ಲಮ್ಮ ಅಕ್ಕಮಹಾದೇವಿ ಜಯಂತಿ ಭಿತ್ತಿ ಪತ್ರಗಳ ಬಿಡುಗಡೆ

ಹುಣಸಗಿ: ಪಟ್ಟಣ ಮಹಾದೇವಪ್ಪ ಸಾಹುಕಾರ್ ಬಳಿ ಮಂಗಲ ಭವನದಲ್ಲಿ ಜೂನ್ 1 ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ,ಹೇಮರೆಡ್ಡಿ ಮಲ್ಲಮ್ಮ,ವೈರಾಗ್ಯ ನಿಧಿ ಅಕ್ಕಮಹಾದೇವಿಯವರ ಜಯಂತಿ ಮಹೋತ್ಸವ ಹಾಗೂ ವಿವಿಧ ರಂಗಗಳಲ್ಲಿನ ಸಾಧಕರ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆ ಹಾಗೂ ಭಿತ್ತಿ ಪತ್ರಗಳನ್ನು ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಬಳಿಯ ಶ್ರೀ ಮಲ್ಲಯ್ಯನ ದೇವಸ್ಥಾನದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಸಲಾಯಿತು.

ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ,ಮುದನೂರ ಕಂಠಿ ಮಠದ ಶಾಂತ ಮಲ್ಲಿಕಾರ್ಜುನ್ ಶಿವಾಚಾರ್ಯರ ಸಾನಿಧ್ಯದಲ್ಲಿ ಹಾಗೂ ಶ್ರೀ ಚೆನ್ನಯ್ಯ ಸ್ವಾಮಿ ಹಿರೇಮಠ್, ಸಿದ್ದಣ್ಣ ಸಾಹು ಮಲಗಲದಿನ್ನಿ, ಶರಣು ಸಾಹು ದಂಡಿನ, ಸಿದ್ದು ಸಾಹು ಮುದಗಲ್, ನಿಂಗಣ್ಣ ಸಾಹು ಬಳಿ, ಬಸವರಾಜ ಬಳಿ, ಬಸಲಿಂಗಯ್ಯ ಹಿರೇಮಠ್, ರಾಜಶೇಖರ್ ದೇಸಾಯಿ ಬೈಲಕುಂಟಿ,ಬಸವರಾಜ ಪಡಶೆಟ್ಟಿ,ಮಹಾಂತೇಶ್ ಮಲಗಲದಿನ್ನಿ,ಮಲ್ಲಣ್ಣ ಸಾಹುಕಾರ, ಬಸವರಾಜ ಸಜ್ಜನ, ಶಾಂತಪ್ಪ ಬಾಕ್ಲಿ, ಬಸವರಾಜ್ ಸಜ್ಜನ್, ರಾಜು ಮಲಗಲದಿನ್ನಿ, ಸಿದ್ದನಗೌಡ ಬಿರಾದಾರ ದೇವೆಗೌಡ ಗೆದ್ದಲಮರಿ,ಪ್ರಭುಗೌಡ ಪೂತರೆಡ್ಡಿ ಸೇರಿದಂತೆ ಅನೇಕರ ಉಪಸ್ಥಿತಿಯಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಸೇರಿದಂತೆ ಸಂಘದ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

20 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

59 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago