ಬಿಸಿ ಬಿಸಿ ಸುದ್ದಿ

ಕಲಬುರಗಿ: ಮುಂಗಾರು ಬೀಜ ದಿನೋತ್ಸವ

ಕಲಬುರಗಿ: ವಲಯ ಕೃಷಿ ಸಂಶೋಧನಾ ಕೇಂದ್ರ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ ಮತ್ತು ಕೃಷಿ ಸಂಶೋಧನಾ ಕೇಂದ್ರ, ರದ್ದೆವಾಡಗಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮುಂಗಾರು ಬೀಜ ದಿನೋತ್ಸವದಲ್ಲಿ ವಿವಿಧ ಗ್ರಾಮಗಳಿಂದ ಸುಮಾರು 150 ಜನ ರೈತರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತರಿಗೆ ಮುಂಗಾರು ಹಂಗಾಮಿನ ಸಿದ್ಧತೆ, ತಳಿಗಳ ಮತ್ತು ತಾಂತ್ರಿಕತೆಗಳ ಬಗ್ಗೆ ವಿವಿರವಾಗಿ ಮಾಹಿತಿ ನೀಡಲಾಯಿತು. ಇದಲ್ಲದೇ ತೊಗರಿ ಬೀಜೋತ್ಪಾದನೆ, ಸುಧಾರಿತ ಬೇಸಾಯ ಕ್ರಮಗಳ ಹಾಗೂ ಬೀಜೋಪಚಾರದ ಮಾಹಿತಿಯನ್ನು ವಿವಿರವಾಗಿ ತಿಳಿಸಿಕೊಡಲಾಯಿತು.

ಇದಲ್ಲದೆ ಬೆಳೆಗಳಿಗೆ ತಗಲುತ್ತಿರುವ ರೋಗಗಳ ನಿಯಂತ್ರಣ ಮತ್ತು ಕೀಟಗಳ ನಿರ್ವಹಣೆ ಕುರಿತು ಸಂಬಂಧಿಸಿದ ವಿಜ್ಞಾನಿಗಳಿಂದ ಮಾಹಿತಿ ನೀಡಲಾಯಿತು. ನೂತನ ತಳಿಗಳ ಬಳಕೆ, ತಾಂತ್ರಿಕ ಸಮಸ್ಯೆಗಳ ಬಗ್ಗೆ, ಪಲ್ಸ್ ಮ್ಯಾಜಿಕ್ ಮತ್ತು ಚಿಕ್‍ಪಿ ಮ್ಯಾಜಿಕ ಮತ್ತು ಜೈವಿಕ ಗೊಬ್ಬರಗಳ ಬಳಸುವ ವಿಧಾನವನ್ನು ತಿಳಿಸಿಕೊಡಲಾಯಿತು. ಕೃಷಿ ಉಪ ನಿರ್ದೇಶಕರು ಇಲಾಖೆಯಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವಿವಿರವಾದ ಮಾಹಿತಿಯನ್ನು ನೀಡಿದರು.

ರಾಜ್ಯ ಮಟ್ಟದಲ್ಲಿ ಕಡಲೆ ಹಿಂಗಾರು ಮಳೆಯಾಶ್ರಿತ ಪುರುಷರ ವಿಭಾಗದ ಬೆಳೆ ಸ್ಪರ್ಧೆಯಲ್ಲಿ ಸೇಡಂ ತಾಲೂಕಿನ ಊಡಗಿ ಗ್ರಾಮದ ಶ್ರೀ ಸೋಮಣ್ಣ ತಂದೆ ಮಲ್ಕಪ್ಪ ಬೋಮನಳ್ಳಿ ಇವರು ರಾಜ್ಯ ಮಟ್ಟದ ಕೃಷಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದು ನಮ್ಮಲ್ಲೆರಿಗೂ ಹೆಮ್ಮೆಯ ಸಂಗತಿಯಾಗಿದೆ. ಆದಕಾರಣ ಈ ಕಾರ್ಯಕ್ರಮದಲ್ಲಿ ಶ್ರೀ ಸೋಮಣ್ಣ ತಂದೆ ಮಲ್ಕಪ್ಪ ಬೋಮನಳ್ಳಿ ಇವರಿಗೆ ಶಾಲು ಹೊದಿಸಿ ಸನ್ಮಾನವನ್ನು ಮಾಡಿ ಗೌರವಿಸಲಾಯಿತು.

ಗೌರವಾನ್ವಿತ ಅತಿಥಿಗಳಾಗಿ ಶ್ರೀಮತಿ ಅನುಸುಯಾ ಹೂಗಾರ, ಕೃಷಿ ಉಪ ನಿದೇಶಕರು, ಕಲಬುರಗಿ ಇವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಡಾ. ವಾಸುದೇವ ನಾಯಕ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ರದ್ದೆವಾಡಗಿ (ಕಲಬುರಗಿ-II) ಇವರು ಭಾಗವಹಿಸಿ ರೈತರಿಗೆ ಕೃಷಿ ಸಂಬಂಧಿತ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಿ.ಎಂ.ದೊಡಮನಿ, ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕಲಬುರಗಿ ಇವರು ವಹಿಸಿಕೊಂಡಿದ್ದರು. ಕೇಂದ್ರದ ವಿಜ್ಞಾನಿಗಳಾದ ಡಾ. ಬಿ. ಎಸ್. ರೆಡ್ಡಿ, ಪ್ರಾಧ್ಯಾಪಕರು (ಕೃಷಿ ಅರ್ಥಶಾಸ್ತ್ರ) &ಹಿರಿಯ ಕ್ಷೇತ್ರ ಅಧೀಕ್ಷಕರು, ಡಾ. ಮುನಿಸ್ವಾಮಿ ಎಸ್., ಪ್ರಧಾನ ವಿಜ್ಞಾನಿ(ತಳಿ ವರ್ಧಕ), ಡಾ. ಬಸವರಾಜ ಕೆ., ಹಿರಿಯ ವಿಜ್ಞಾನಿ (ಮಣ್ಣು ವಿಜ್ಞಾನ), ಡಾ. ಶೋಭಾರಾಣಿ, ಹಿರಿಯ ವಿಜ್ಞಾನಿ (ಕೀಟಶಾಸ್ತ್ರ), ಡಾ. ಮಲ್ಲಿಕಾರ್ಜುನ ಕೆಂಗನಾಳ, ಹಿರಿಯ ವಿಜ್ಞಾನಿ (ಸಸ್ಯರೋಗಶಾಸ್ತ್ರ), ಡಾ. ಪಂಪನಗೌಡ, ವಿಜ್ಞಾನಿ (ಸೂಕ್ಷ್ಮಾಣುಜೀವ ಶಾಸ್ತ್ರ), ಡಾ. ಲಕ್ಷುಮಣ, ವಿಜ್ಞಾನಿ(ತಳಿ ವರ್ಧಕ) ಮತ್ತು ಡಾ. ಆನಂದ ಪೋಲಿಸ ಪಾಟೀಲ, ವಿಜ್ಞಾನಿ (ಬೇಸಾಯಶಾಸ್ತ್ರ)ಇವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಗೆ ಮಾಹಿತಿಯನ್ನು ಒದಗಿಸಿದರು. ಅನೇಕ ಪ್ರಗತಿ ಪರ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸುವ ಜೊತೆಗೆ ತಮ್ಮ ಅನುಭವವನ್ನು ಹಂಚಿಕೊಂಡರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago