ಕಲಬುರಗಿ: ಈ ನೆಲದ ಭಾಷೆ, ಸಂಸ್ಕøತಿ ರಕ್ಷಣೆ ಮಾಡುವ ನಿಟ್ಟಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ 45ನೇ ಜನ್ಮದಿನದ ನಿಮಿತ್ತ ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕ್ರಿಯಾಶೀಲ ಗೆಳೆಯರ ಬಳಗದ ಜಂಟಿ ಆಶ್ರಯದಲ್ಲಿ ಜೂನ್ ಎರಡನೇ ವಾರದಲ್ಲಿ ನಗರದ ಕನ್ನಡ ಭವನದ ಆವರಣದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಸಾಹಿತ್ಯ ಸಂಸ್ಕøತಿ ಉತ್ಸವ-2024 ಭಾಷೆ-ಸಂಸ್ಕøತಿ-ಕಲೆಯ ಸಂಭ್ರಮದ ವಿಶೇಷ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಗುರೂಜಿ ಪದವಿ ಮಹಾವಿದ್ಯಾಲಯದ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ ಹಾಗೂ ಗೌರವಾಧ್ಯಕ್ಷರನ್ನಾಗಿ ಉಪನ್ಯಾಸಕ ಧರ್ಮರಾಜ ಜವಳಿ ಅವರನ್ನು ನೇಮಕ ಮಾಡಿ, ಅಧಿಕೃತವಾಗಿ ಸತ್ಕರಿಸಿ ಆಹ್ವಾನ ನೀಡಲಾಯಿತು.
ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ನಮ್ಮ ಒತ್ತಡದ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿ ದೊರೆಯಬೇಕಾದರೆ ಸಾಹಿತ್ಯ-ಸಂಸ್ಕøತಿಗಳು ಅವಶ್ಯ. ಈ ಮೂಲಕ ಸಮಾಜ ಸುಧಾರಣೆ ಮಾಡಲು ಸಾಧ್ಯ. ಸಾಹಿತ್ಯದಿಂದ ಜೀವನ ಮೌಲ್ಯಗಳನ್ನು ಬಿತ್ತಿದರೆ ಸಂಸ್ಕøತಿ ನಮ್ಮ ಸ್ಥಿತಿ-ಗತಿ ಪ್ರತಿಬಿಂಬಿಸುತ್ತದೆ. ಅಂಥ ಕಲೆ, ಸಾಹಿತ್ಯ, ಸಂಸ್ಕøತಿಗಳು ಉಳಿಸಿ ಬೆಳೆಸಬೇಕಾಗಿದೆ. ಕಲೆ ಜೀವನದ ಭಾಗವಾದರೆ ಸಾಹಿತ್ಯ ಅದರ ಮೌಲ್ಯವಾಗುತ್ತವೆ ಎಂದು ಹೇಳಿದ ಅವರು, ನಾವು ಪ್ರತಿಪಾದಿಸುವ ಮೌಲ್ಯಗಳು ಕುಸಿಯುತ್ತಿರುವ ಸಂದಭ ್ದಲ್ಲಿ ಇಂದಿನ ಹೊಸ ಪೀಳಿಗೆಗೆ ಜಾಗೃತಿ ಮೂಡಿಸಬೇಕಾಗಿದೆ. ಆ ಮೂಲಕ ನಾವು ಮೌಲ್ಯಾಧರಿತ ಜೀವನ ನಡೆಸಲು ಸಾಧ್ಯ. ಅದಕ್ಕಾಗಿ ಇಂಥದೊಂದು ಉತ್ಸಾಹಭರಿತವಾದ ಉತ್ಸವವನ್ನು ಆಯೋಜಿಸಲಾಗಿದೆ ಎಂದರು.
ಉತ್ಸವ ಸಮಿತಿ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ, ಗೌರವಾಧ್ಯಕ್ಷ ಧರ್ಮರಾಜ ಜವಳಿ ಮಾತನಾಡಿ, ಮಕ್ಕಳು ತಮ್ಮ ಸುಂದರ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಕೇವಲ ಶಿಕ್ಷಣ ಸಾಲದು. ಜತೆಗೆ ಸಂಸ್ಕಾರ ತುಂಬಾ ಅವಶ್ಯಕವಾಗಿದೆ. ಸಂಸ್ಕಾರ ಇಲ್ಲದ ಜೀವನ ವ್ಯರ್ಥವಾದುದು. ಹೀಗಾಗಿ ಕಥೆ, ಸಾಹಿತ್ಯ ಮತ್ತು ಸಂಗೀತದಿಂದ ಉತ್ತಮ ಸಂಸ್ಕಾರ ಪಡೆಯಬಹುದು.; ಅಂಥ ಮೌಲ್ಯ ಪ್ರತಿಪಾದಿಸಲು ಇಂಥ ಉತ್ಸವಗಳು ಬೇಕಾಗಿವೆ ಎಂದು ಮಾರ್ಮಿಕವಾಗಿ ಹೇಳಿದರು.
ಸಾಹಿತಿ ಮುಡುಬಿ ಗುಂಡೇರಾವ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಸಿದ್ಧಲಿಂಗ ಬಾಳಿ, ಪ್ರಭುಲಿಂಗ ಮೂಲಗೆ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ರೇವಣಸಿದ್ದಪ್ಪ ಜೀವಣಗಿ, ವಿಶ್ವನಾಥ ತೊಟ್ನಳ್ಳಿ, ಎಂ ಎನ್ ಸುಗಂಧಿ, ಎಚ್ ಎಸ್ ಬರಗಾಲಿ, ಡಾ. ರೆಹಮಾನ್ ಪಟೇಲ್, ಶಿವಾನಂದ ಪೂಜಾರಿ, ಶಿವಶರಣ ಹಡಪದ, ಗಣೇಶ ಚಿನ್ನಾಕಾರ, ಸೋಮಶೇಖರಯ್ಯಾ ಹೊಸಮಠ, ನವಾಬ ಖಾನ್, ಸೈಯದ್ ನಜೀರುದ್ದೀನ್ ಮುತ್ತವಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…