ಚಿತ್ತಾಪುರ: ತಾಲೂಕಿನ ಮೊಗಲಾ ತಾಂಡಾದಲ್ಲಿ ಕಳ್ಳರು ಮನೆ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಜರುಗಿದೆ.
ಮೊಗಲಾ ತಾಂಡಾದ ನಿವಾಸಿ ಸತೀಶ ರೂಪ್ಲಾ ಪವಾರ್ ಅವರ ಮನೆಯಲ್ಲಿ ಕಳ್ಳರು 6 ಚೀಲ ತೊಗರಿ, 24 ಸಾವಿರ ರೂ.ಯನ್ನು ಕದ್ದು ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತಿಚೆಗೆ ಚಿತ್ತಾಪುರ ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರಿಂದ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಕೆಲ ತಿಂಗಳುಗಳ ಹಿಂದೆ ಕೆಲ ಅಂಗಡಿಗಳು ಕಳ್ಳತನವಾಗಿರುವ ಬಗ್ಗೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಅದ್ಯಾಗೂ ಕಳ್ಳನನ್ನು ಗುರುತಿಸುವಲ್ಲಿ ಸಾಧ್ಯವಾಗಿಲ್ಲ. ಕಳೆದ ಎರಡು ದಿನಗಳ ಹಿಂದೇ ಪಟ್ಟಣದ ಮುಖ್ಯ ರಸ್ತೆ ಲಾಡ್ಜೀಂಗ್ ಕ್ರಾಸ್’ನಲ್ಲಿ ನಾಲ್ಕು ಅಂಗಡಿಗಳು ಕಳ್ಳತನ ಮಾಡಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೀಗೆ ಸತತ ಅಂಗಡಿಗಳ ದರೋಡೆ ಮಾಡಲಾಗುತ್ತಿದ್ದರೂ ಪೊಲೀಸ್ ಇಲಾಖೆ ಮಾತ್ರ ಪ್ರತಿ ಬಾರಿ ದೂರುಗಳನ್ನು ದಾಖಲಿಸಿಕೊಂಡರೂ ಕಳ್ಳರನ್ನು ಕಂಡು ಹಿಡಿಯುವಲ್ಲಿ ಮಾತ್ರ ವಿಫಲವಾಗುತ್ತಿದೆ. ಇದರಿಂದ ಪೊಲೀಸ್ ಇಲಾಖೆಯ ಕುರಿತು ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಅಂಗಡಿಗಳ ಕಳ್ಳತನ ಹಾಗೂ ಮನೆ ಕಳ್ಳತನದ ಕುರಿತು ಕೂಡಲೇ ಪೊಲೀಸರು ಕಟ್ಟುನಿಟ್ಟಿನ ತನಿಖೆ ಕೈಗೊಂಡು ಕಳ್ಳರನ್ನು ಬಂಧಿಸಬೇಕೆಂದು ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…