ಬಿಸಿ ಬಿಸಿ ಸುದ್ದಿ

ಈಶಾನ್ಯ ಪಧವಿಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ಬಿಜೆಪಿಯಿಂದ ಪೂರ್ವಿಬಾವಿ ಸಭೆ

ಶಹಾಬಾದ: ನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಈಶಾನ್ಯ ಪಧವಿಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ಪೂರ್ವಿಬಾವಿ ಸಭೆ ಜರುಗಿತು.

ಸಭೆಯಲ್ಲಿ ವಿಭಾಗಿಯ ಸಹ ಕಾರ್ಯದರ್ಶಿ ಸೂರ್ಯಕಾಂತ ದೋಣಿ ಮಾತನಾಡಿ, ಈ ಬಾರಿ ಈಶಾನ್ಯ ಪಧವಿಧರ ಕ್ಷೇತ್ರದಿಂದ ಅಮರನಾಥ ಪಾಟೀಲರು ಚುನಾವಣೆಯ ಕಣದಲ್ಲಿದ್ದಾರೆ.ಅವರ ಗೆಲುವಿಗೆ ಎಲ್ಲಾ ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು. ಕಳೆದ ಕೆಲ ಕಾರಣಗಳಿಂದ ಟಿಕೆಟ್ ಕೈ ತಪ್ಪಿದೆ.ಆದರೆ ಈ ಬಾರಿ ಅವರಿಗೆ ಟಿಕೆಟ್ ದೊರಕಿರುವುದರಿಂದ ಪದವೀಧರ ಮತದಾರರ ಮನೆಮನೆಗೆ ತೆರಳಿ ಮತದಾರರು ಮನವೊಲಿಸಬೇಕು.ನಮ್ಮ ಪಕ್ಷದ ಕಾರ್ಯಕರ್ತರ ಪ್ರಾಮಾಣಿಕ ದುಡಿಮೆಯ ಮೇಲೆ ಪಕ್ಷದ ಅಭ್ಯರ್ಥಿಯ ಗೆಲುವು ಇದೆ.ಆದ್ದರಿಂದ ಈ ಬಾರಿ ಅಮರನಾಥ ಪಾಟೀಲರ ಗೆಲುವು ಖಚಿತವಾಗಲಿದೆ ಎಂದರು.
ಕಲಬುರಗಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ಅಮರನಾಥ ಪಾಟೀಲ್ ಈ ಹಿಂದೆ ಎಂಎಲ್ಸಿ ಸೇರಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಕ್ಷೇತ್ರದ ಎಲ್ಲೆಡೆ ಬಿಜೆಪಿ ಪರ ವಾತಾವರಣವಿದ್ದು, ಪಾಟೀಲ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೂನ್ 3ರಂದು ನಡೆಯಲಿರುವ ಈಶಾನ್ಯ ಪದವಿಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ, ಅಭಿವೃದ್ಧಿಗಾಗಿ ಈ ಬಾರಿ ಅಮರನಾಥ ಪಾಟೀಲ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಂಡಲ ಪ್ರಭಾರಿ ಅರುಣ ಪಟ್ಟಣಕರ, ಬೂತ್ ಸಂಚಾಲಕ ಸಿದ್ರಾಮ ಕುಸಾಳೆ, ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೊಳಕರ, ನಿಕಟಪೂರ್ವ ಅಧ್ಯಕ್ಷ ಅಣವೀರಪ್ಪ ಇಂಗಿನಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ ಗೌಳಿ, ದೇವದಾಸ ಜಾಧವ, ಶರಣಪ್ಪ ಬುಕಶೆಟ್ಟಿ, ಸದಾನಂದ ಕುಂಬಾರ, ಚಂದ್ರಕಾಂತ ಗೊಬ್ಬೂರಕರ, ಶಿವಕುಮಾರ ಇಂಗಿನಶೆಟ್ಟಿ, ಬಸವರಾಜ ಬಿರಾದಾರ, ಶಶಿಕಲಾ ಸಜ್ಜನ, ಜ್ಯೋತಿ ಶರ್ಮ, ಲತಾ ಸಂಜೀವ, ಜಯಶ್ರೀ ಸೂಡಿ, ನಂದಾ ಗುಡೂರ, ಪಾರ್ವತಿ ಪವಾರ, ಪದ್ಮಾ ಕಟಕೆ, ಸನ್ನಿಧಿ ಕುಕಲರ್ಣಿ ಮತ್ತು ಪ್ರಮುಖರು ಹಾಗೂ ತೊನಸನಹಳ್ಳಿ (ಎಸ್), ಗೋಳಾ (ಕೆ), ದೇವನತೆಗನೂರ, ಭಂಕೂರ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

ದೇವದಾಸ ಜಾಧವ ಸ್ವಾಗತಿಸಿ ನಿರೂಪಿಸಿದರು, ಸಿದ್ರಾಮ ಕುಸಾಳೆ ವಂದಿಸಿದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

5 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

5 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago