ಕೊಪ್ಪಳ: ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿತ್ತಿದ್ದು,ಪ್ರತಿಯೊಬ್ಬರು ಕೂಡಾ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.
ಅವರು ತಾಲೂಕಿನ ಹೊಸಗೊಂಡಬಾಳ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಹದ್ದೂರಬಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಕಡಿಮೆಯಾಗಿರುವುದರಿಂದ ಸಮಾಜದಲ್ಲಿ ಅನೇಕ ಅಹಿತಕರ ಘಟನೆಗಳು ಜರುಗುತ್ತಿವೆ. ಪ್ರತಿಯೊಬ್ಬ ನಾಗರಿಕನು ಮಾನವೀಯ ಮೌಲ್ಯಗಳನ್ನು ತನ್ನಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ. ಅಲ್ಲದೇ ವಿವಿಧ ಕ್ಷೇತ್ರದಲ್ಲಿ ಸ್ಪರ್ಧೇಯು ಹೆಚ್ಚಾಗಿದೆ. ಸ್ಪರ್ಧೇಗೆ ತಕ್ಕಂತೆ ಶಿಕ್ಷಣ ನೀಡಬೇಕು ಹಾಗೂ ಮಕ್ಕಳು ಕೂಡಾ ಸ್ಪರ್ಧೇಗೆ ಪೈಪೋಟಿ ನೀಡಬೇಕಾದರೇ ಅದರಂತೆ ತರಬೇತಿ ಪಡೆಯಬೇಕು ಅಂದಾಗ ಮಾತ್ರ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುನಿರಾಬಾದ ಡಯಟ್ ನ ಉಪನ್ಯಾಸಕರಾದ ಪ್ರಾಣೇಶ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಉಂಟಾಗುವ ಬದಲಾವಣೆಗೆ ತಕ್ಕಂತೆ ಬೋಧನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ರಜೆಯ ಅವಧಿಯಲ್ಲಿ ತರಬೇತಿಯನ್ನು ಕೊಡಲಾಗುತ್ತಿದ್ದು, ತರಬೇತಿಯಲ್ಲಿ ನೀಡಿದ ವಿಷಯಗಳನ್ನು ಶಿಕ್ಷಕರು ತರಗತಿಯ ಕೊಠಡಿಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೇಳಿದರು.
ಬಹದ್ದೂರಬಂಡಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣ ಬಹಳ ಮಹತ್ವದಾಗಿದೆ. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿ ಸಹಾಯಕವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ತಮ್ಮಣ್ಣನವರ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲಕ್ಷ್ಮೀ ಸಿದ್ದಪ್ಪ ಕಲಾಲ ಉದ್ಘಾಟಿಸಿದರು. ವರ್ಗಾವಣೆಗೊಂಡ ಮತ್ತು ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಯಟ್‍ನ ಹಿರಿಯ ಉಪನ್ಯಾಸಕರಾದ ಕಂಠ್ಯೇಪ್ಪ ಕಟ್ಟಿಮನಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎಂ.ಅಳಗವಾಡಿ, ಕುಣಿಕೇರಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ, ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಬಾಲನಾಗಮ್ಮ, ಖಜಾಂಚಿ ಗುರುರಾಜ ಕುಲಕರ್ಣಿ, ನಿರ್ದೇಶಕರಾದ ರವಿಕುಮಾರ, ಶೈಲಾನಿಬಾಷಾ, ಬೇವಿನಹಳ್ಳಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯಲಕ್ಷ್ಮೀ ಮಠದ, ಶಿಕ್ಷಕರಾದ ಸಂಗನಗೌಡ, ಪ್ರದೀಪ ನವಲೆ, ಸತ್ಯನಾರಾಯಣ ಸಿದ್ದಾಂತಿ, ಗ್ರಾ.ಪಂ.ಸದಸ್ಯರಾದ ಶರಣಪ್ಪ ಭಾವಿಕಟ್ಟಿ, ಖಾಜಾಬೀ ಮುಂತಾದವರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…