ವರದಿಗೆ ಎಚ್ಚೆತ್ತ ಪೊಲೀಸ್ ಇಲಾಖೆ ಅಕ್ರಮ ಚಟುವಟಿಕೆಗೆ ಕಡಿವಾಣ

0
35
  • ರಾಜು ಕುಂಬಾರ ಸುರಪುರ

ಸುರಪುರ: ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಕಳೆದ ಒಂದು ವರ್ಷ ದಿಂದ ಬಹಿರಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟದ ಕುರಿತು ಪೊಲೀಸ್ ಇಲಾಖೆಯನ್ನು ಎಚ್ಚರಿಸಿ ವರದಿ ಪ್ರಸಾರಕ್ಕೆ ಎಚ್ಚೆತ್ತ ಪೊಲೀಸ್ ಇಲಾಖೆ ತಾಂಡಾದಲ್ಲಿ ಇಸ್ಪೀಟ್ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಗೌಪ್ಯ ಮಾಹಿತಿ ಸಂಗ್ರಹಣೆಯ ಕಾರ್ಯನಿರ್ವಹಿಸುತ್ತಿದ್ದ (ಎಸ್.ಬಿ ಡ್ಯೂಟಿ) ಪೊಲೀಸ್ ಪೇದೆ ಆನಂದ ಎನ್ನುವವರನ್ನು ಅಮಾನತ್ತುಗೊಳಿಸಲಾಗಿದೆ.

Contact Your\'s Advertisement; 9902492681

ಅಲ್ಲದೆ ಕೆಂಭಾವಿ ಠಾಣೆಯ ಪಿ.ಎಸ್.ಐ ರಾಜಶೇಖರ ರಾಠೋಡ ಅವರಿಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ:ಜಿ.ಸಂಗೀತಾ ಅವರು ಖಡಕ್ ಎಚ್ಚರಿಕೆ ನೀಡಿ ಎಲ್ಲಿಯಾದರು ಅಕ್ರಮ ಚಟುವಟಿಕೆ ನಡೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.

ಸಮಾಜದ ಸ್ವಾಸ್ಥ್ಯವನ್ನು ಗಮನದಲ್ಲಿಟ್ಟುಕೊಂಡು ವರದಿ ಪ್ರಕಟಿಸಿದ ಪತ್ರಿಕೆಗೆ ತಾಂಡಾ ಜನರ ಕಾಳಜಿ ತೋರಿ ಪೊಲೀಸ್ ಇಲಾಖೆಯ ಗಮನ ಸೆಳೆದಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಎಲ್ಲಾ ಮುಖಂಡರಿಗೆ ಕಿರದಳ್ಳಿ ತಾಂಡಾದ ಜನರು ಪ್ರಶಂಸೆ ವ್ಯಕ್ತಪಡಿಸಿ ಧನ್ಯವಾದ ಸಲ್ಲಿಸಿದ್ದಾರೆ.ಅಲ್ಲದೆ ಮುಂದೆಯೂ ಇಂತಹ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಪೊಲೀಸ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪೊಲೀಸ್ ಇಲಾಖೆಯ ಕಾರ್ಯಕ್ಕೆ ಪತ್ರಿಕೆಯೂ ಪ್ರಶಂಸೆ ವ್ಯಕ್ತಪಡಿಸುವ ಜೊತೆಗೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗಣದೊಡ್ಡಿ,ತಿಪ್ಪನಟಗಿ,ಬೈಚಬಾಳ ಸೇರಿದಂತೆ ಸುರಪುರ ತಾಲೂಕಿನ ಇನ್ನೂ ಅನೇಕ ಕಡೆಗಳಲ್ಲಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದ್ದು ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಿಯೂ ಇಸ್ಪೀಟ್ ಮಟಕಾದಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ ಎಂದು ಆಶಿಸುತ್ತದೆ.

ನಮ್ಮ ತಾಂಡಾದಲ್ಲಿ ಇಸ್ಪೀಟ್ ಹಾವಳಿಗೆ ಕುಟುಂಬಗಳು ಬೀದಿ ಪಾಲಾಗುವ ಸ್ಥಿತಿ ಬಂದಿತ್ತು, ಕರ್ನಾಟಕ ದಲಿತ ಸಂಘರ್ಷ ಸಮಿತಿಯವರು ನಮ್ಮ ತಾಂಡಾದ ಸಮಸ್ಯೆಗೆ ಸ್ಪಂದಿದ್ದಕ್ಕೆ ಮತ್ತು ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುತ್ತೇವೆ. – ಲಾಲು ಚವ್ಹಾಣ್ ಕಿರದಳ್ಳಿ ತಾಂಡಾ ನಿವಾಸಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here