ಹೈದರಾಬಾದ್ ಕರ್ನಾಟಕ

ನಕಲಿ ಕಾರ್ಮಿಕರ ಕಾರ್ಡ್ ಪತ್ತೆ ಹಚ್ಚಿ ರದ್ದುಗೊಳಿಸಿ; ಕಯುರವೇ ಮನವಿ

ಸುರಪುರ: ತಾಲೂಕಿನಾದ್ಯಂತ ಕಾರ್ಮಿಕ ಇಲಾಖೆಯಲ್ಲಿ ನಕಲಿ ಕಟ್ಟಡ ಕಾರ್ಮಿಕರ ನೊಂದಣಿ ಕಾರ್ಡ್‍ಗಳು ಹೆಚ್ಚಾಗಿದ್ದು ಕೂಡಲೇ ಅವುಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಯುವ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದರು.

ನಗರದ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು,ಇಂದು ನಕಲಿ ಕಾರ್ಮಿಕರ ಕಾರ್ಡ್‍ಗಳ ಹಾವಳಿ ಹೆಚ್ಚಾಗಿದೆ,ಇದರಿಂದ ಸರಕಾರದ ಸೌಲಭ್ಯಗಳು ನಕಲಿ ಕಾರ್ಡ್ ಪಡೆದುಕೊಂಡವರ ಪಾಲಾಗುತ್ತಿದ್ದು,ನೈಜ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಸಿಗದೆ ವಂಚಿತರಾಗುತ್ತಿದ್ದಾರೆ,ಆದ್ದರಿಂದ ಕೂಡಲೇ ನಕಲಿ ಕಾರ್ಡ್‍ಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸುವ ಜೊತೆಗೆ ಕಾರ್ಡ್ ಪಡೆದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ನಂತರ ಕಾರ್ಮಿಕರ ಅಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂತೋಷ ಭೂಮಶೆಟ್ಟಿ,ಉಪಾಧ್ಯಕ್ಷ ಸುನಿಲಕುಮಾರ ಸೂಗೂರ,ವಿನೋದಕುಮಾರ್,ತಾ.ಅಧ್ಯಕ್ಷ ಮೌನೇಶ,ಕಾರ್ಯದರ್ಶಿ ದೇವರಾಜ ಸೇರಿದಂತೆ ಇತರರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago