ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಗಮನದಲ್ಲಿಟ್ಟು ಪಕ್ಷಕ್ಕೆ ಬೆಂಬಲಿಸಿ: ಮೋತಕಪಲ್ಲಿ

ಕಲಬುರಗಿ: ಈಶಾನ್ಯ ಪದವಿಧರರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಾಲಿ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಬರುವ ಜೂನ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಚಿಂಚೋಳಿ ವಿಧಾನ ಸಭಾ ಮತಕ್ಷೇತ್ರದ ಮತದಾರರು ಬೆಂಬಲಿಸುವ ಮೂಲಕ ಪ್ರಚಂಡ ಬಹುಮತದಿಂದ ಆರಿಸಿ ತರಲು ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರರಾದ ಶರಣು ಪಾಟೀಲ ಮೋತಕಪಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆದು ಪದವಿ ಮುಗಿಸಿದ ನಿರುದ್ಯೋಗಿ ಯುವಕರಿಗೆ ಮಾಸಿಕ ಮೂರು ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡುತ್ತಿದೆ. ಡಾ.ಚಂದ್ರಶೇಖರ ಪಾಟೀಲ್ ಅವರನ್ನು ಈ ಪರಿಷತ್ ಚುನಾವಣೆಯಲ್ಲಿ ಆರಿಸಿ ತಂದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಅಧಿಕಾರದಲ್ಲಿ ಇರುವುದರಿಂದ ಪದವೀಧರರ ಅವಶ್ಯಕತೆಗಳನ್ನು ಪೂರೈಸಲು, ಹೊಸ ಉದ್ಯೋಗ ಸೃಷ್ಟಿಸಲು ಸಾಧ್ಯ ಅಲ್ಲದೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾವಂತ ಯುವ ಜನತೆಯ ಮುಂದಿರುವ ಸವಾಲುಗಳನ್ನು ಎದುರಿಸುವ ಇಚ್ಛಾಶಕ್ತಿಯೊಂದಿಗೆ ಸದಾ ಜನಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಾ. ಚಂದ್ರಶೇಖರ ಪಾಟೀಲ್ ಹುಮನಾಬಾದ ಇವರು ಸ್ವಯಂ ಪದವಿಧರರಾಗಿದ್ದು ತಾಲೂಕು ಕೇಂದ್ರವಾದ ಹುಮನಾಬಾದ ಅಂತಹ ಸಣ್ಣ ನಗರದಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದಾರೆ.

ಪರಿಷತ್ ಸದಸ್ಯರಾದ ನಂತರ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದು ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ಮತ್ತೊಂದು ಅವಧಿಗೆ ಅವರನ್ನು ಆರಿಸಿ ತರುವ ಮೂಲಕ ಇನ್ನೂ ಹೆಚ್ಚಿನ ಸೇವೆಯನ್ನು ಮಾಡಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago