ಚಿತ್ತಾಪುರ: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸುವ ಮಹತ್ವದ ಪರೀಕ್ಷೆಗಳು ಇಂಥಹ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೊರುತ್ತೇನೆ ಎಂದು ಪುರಸಭೆ ಸದಸ್ಯ ಜಗದೀಶ ಚವ್ಹಾಣ ಹೇಳಿದರು.
ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಂಡಾದ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದ ಅವರು, ತಮ್ಮ ಕೌಟುಂಬಿಕ ಅನಾನೂಕೂಲ ಇದ್ದರೂ ಕೂಡಾ ತಾಂಡಾದ ಕೆಲ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದು ತಾಂಡಾಕ್ಕೆ ಕೀರ್ತಿ ತಂದಿದ್ದಾರೆ. ಅವರು ತಮ್ಮ ಮುಂದಿನ ಭವಿಷ್ಯದಲ್ಲಿ ಸರ್ಕಾರವು ನೀಡುತ್ತಿರುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಇನ್ನು ಹೆಚ್ಚು ಹೆಚ್ಚು ಅಂಕ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆ ತಾಂಡಾಕ್ಕೂ ಹೆಸರು ತರಬೇಕೆಂದು ಸೇವಾಲಾಲ್ ಮಹಾರಾಜರ ಆಶೀರ್ವಾದ ತಮ್ಮಗೆ ಸಿಗಲಿ ಎಂದು ಹಾರೈಸಿದರು.
ತಾಂಡಾದ ಮುಖಂಡರಾದ ವಿನೋದ ಪವಾರ್, ಗೊಪಿ ಬಾಮಲಾ ರಾಠೋಡ, ವಿಶ್ವನಾಥ ರಾಠೋಡ, ಜಗದೀಶ ಪವಾರ್, ವಾಸು ನಾಯಕ, ರೊಹನ್ ಜಾಧವ, ಅಂಬಾದಾಸ ಚವ್ಹಾಣ, ಅಪ್ಪು ಚವ್ಹಾಣ, ಲೊಕೇಶ ರಾಠೋಡ, ಅನಿಲ್ ರಾಠೋಡ, ಸತೀಶ ರಾಠೋಡ, ಪ್ರಕಾಶ ರಾಠೋಡ ಸೇರಿದಂತೆ ಮಕ್ಕಳ ಪಾಲಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…