ಕಲಬುರಗಿ: ಇದೇ ಜೂ. 3 ರಂದು ಮತದಾನ ನಡೆಯಲಿರುವ ಈಶಾನ್ಯ ಪದವಿಧರ ಮತಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹುರಿಯಳಾಗಿ ಪುನರಾಯ್ಕೆ ಬಯಸಿ ನಿಂತಿರುವ ಡಾ. ಚಂದ್ರಶೇಖರ ಪಾಟೀಲ್ ಇವರಿಗೆ ಮತ ಹಾಕುವಂತೆ ಕೋರಿ ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲರು ಇಂದು ಬಿರುಸಿನ ಪ್ರಚಾರ ನೆಸಿದರು.
ಇಲ್ಲಿನ ಹುಸೇನ್ ಗಾರ್ಡನ್‌ನಲ್ಲಿರುವ ಹುಸೇನ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಲ್ಲಂಪ್ರಭು ಪಾಟೀಲರು ಪದವೀಧರರ ಅನೇಕ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷ ಸ್ಪಂದಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲಿಯೂ ಹೆಚ್ಚಿಗೆ ಸ್ಪಂದನೆ ಮಾಡಲಿದೆ. ರಾಜ್ಯಾದ್ಯಂತ ಇರುವ ಖಾಲಿ ಹುದ್ದೆ ಭರ್ತಿಗೂ ಮುಂದಾಗಿದೆ. ಕಲ್ಯಣ ನಾಡಲ್ಲಿ ಈ ಕ್ರಮಕ್ಕೆ ವೇಗ ನೀಡಲಾಗಿದೆ. ಇವೆಲ್ಲ ಕಾರಣಗಳಿಂದಾಗಿ ಪದವೀಧರರು ಎಲ್ಲರು ಡಾ. ಚಂದ್ರಶೇಖರ ಪಾಟೀಲರಿಗೆ ಮತ ಹಾಕಿ ಇನ್ನೊಮ್ಮೆ ಪದವೀಧರರ ಸೇವೆಗೆ ಅವಕಾಶ ಕಲ್ಪಿಸುವಂತೆ ಕೋರಿದರು.
ಹುಸೇನ್ ಸ್ಕೂಲ್ ಚೇರ್ಮನ್ ಇಲಿಯಾಸ್ ಭಾಗವಾನ್, ಮಾಜಿ ಮೇಯರ್ ಶರಣಕುಮಾರ್ ಮೋದಿ, ಶಾಲೆಯ ಪ್ರಾಚಾರ್ಯರಾದ ಖಾನ್ ಸಾಬ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಮ್ ಖಾನ್, ಮಾಜಿ ಪಾಲಿಕೆ ಸದಸ್ಯ ತನವಿರ್ ಅಹ್ಮದ್ ಸರಡಗಿ ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದರಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…