ಕಲಬುರಗಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗ ನಿರ್ಣಯಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ.
ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗುವ ಈ ನಿಯಮದಡಿ ಉದ್ಯೋಗವಂಚಿತ ವಿವಿಧ ಬಗೆಯ ವಿಕಲಚೇತನ ವ್ಯಕ್ತಿಗಳಿಗೂ ಕೂಡ ವಿಶೇಷ ಮೀಸಲಾತಿಯನ್ನು ನೀಡಬೇಕೆಂದು ವಿಕಲಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲದ (ಸಕ್ಷಮ) ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ ಒತ್ತಾಯಿಸಿದ್ದಾರೆ.