ಬಿಸಿ ಬಿಸಿ ಸುದ್ದಿ

ತಂಬಾಕು ಸೇವನೆಯಿಂದ ಕ್ಯಾನ್ಸರ್ ಜೊತೆಗೆ ಪರಿಸರ ಹಾಳಾಗುತ್ತದೆ

ಸುರಪುರ:ಕ್ಯಾನ್ಸರ್ ಸೇವನೆ ಎಂಬುದು ಮನುಷ್ಯ ತನ್ನ ಸಾವನ್ನು ತಾನೇ ತಂದು ಕೊಳ್ಳುತ್ತಾನೆ,ಅಲ್ಲದೆ ತಂಬಾಕು ಸೇವನೆಯಿಂದ ಪರಿಸರವು ಕೂಡ ಹಾಳಾಗುತ್ತದೆ ಎಂದು ಸುರಪುರ ನ್ಯಾಯಾಲಯದ ದಿವಾಣಿ ನ್ಯಾಯಾಧೀಶ ಮಾರುತಿ ಕೆ. ತಿಳಿಸಿದರು.

ನಗರಸಭೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ತಾಲೂಕು ನ್ಯಾಯವಾದಿಗಳ ಸಂಘ,ನಗರಸಭೆ ಸುರಪುರ,ತಾಲೂಕು ಆರೋಗ್ಯ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಘನತ್ಯಾಜ್ಯ ನಿರ್ವಹಣೆ ಹಾಗೂ ವಿಶ್ವ ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ತಂಬಾಕು ಎನ್ನುವುದು ಒಂದು ವಿಷಕಾರಿ ಪದಾರ್ಥವಾಗಿದ್ದು,ಇದು ಮನುಷ್ಯ ಸೇವಿಸುವುದರಿಂದ ಕ್ಯಾನ್ಸರ್ ಕಾಯಿಲೆ ಮಾತ್ರವಲ್ಲದೆ ಇನ್ನೂ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಾನೆ ಇದನ್ನು ಮನಗಂಡು 1987 ಮೇ 31 ರಿಂದ ವಿಶ್ವಸಂಸ್ಥೆ ತಂಬಾಕು ನಿಷೇಧ ದಿನಾಚರಣೆ ಆರಂಭಿಸಿದೆ. ಅದರಂತೆ ಘನತ್ಯಾಜ್ಯ ನಿರ್ವಹಣೆ ಎನ್ನುವುದು ಒಂದು ಸವಾಲಿನ ಕೆಲಸವಾಗಿದೆ.ಪ್ರತಿಯೊಬ್ಬರು ಪ್ಲಾಸ್ಟಿಕ್ ಉಳಕೆ ನಿಲ್ಲಿಸಬೇಕು ಮತ್ತು ಆದಷ್ಟು ಹಸಿ ಕಸ ಮತ್ತು ಒಣ ಕಸವನ್ನು ಬೇರೆ ಬೇರೆಯಾಗಿ ಹಾಕುವುದರಿಂದ ತ್ಯಾಜ್ಯ ನಿರ್ವಹಣೆಯೂ ಸುಲಭವಾಗಲಿದೆ ಇದಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಪೌರಾಯುಕ್ತ ಮಂಜುನಾಥ ಮಾತನಾಡಿ,ನಗರಸಭೆಯಿಂದ ನಿತ್ಯವು ಮನೆ ಮನೆಗೆ ಭೇಟಿ ನೀಡಿ ಮನೆಗಳಲ್ಲಿನ ಘನ ತ್ಯಾಜ್ಯವನ್ನು ಸಂಗ್ರಹಿಸಿ ಸಾವಿರಾರು ಕೇಜಿ ತ್ಯಾಜ್ಯವನ್ನು ವಿಲೇವಾರಿಗೊಳಿಸುತ್ತೇವೆ.ಪರಿಸರಕ್ಕೂ ಹಾನಿಯಾಗದಂತೆ ನಿಗಾವಹಿಸಿ ಸಂಗ್ರಹವಾಗುವ ತ್ಯಾಜ್ಯವನ್ನು ನಾಶಗೊಳಿಸುವ ಮೂಲಕ ಪರಿಸರ ಕಾಳಜಿಯನ್ನು ನಿರ್ವಹಿಸುತ್ತೇವೆ,ಅಲ್ಲದೆ ತಂಬಾಕು ಎನ್ನುವುದು ಮನುಷ್ಯನಿಗೆ ಅತಿದೊಡ್ಡ ಶತ್ರುವಿನಂತಹ ಪದಾರ್ಥವಾಗಿದೆ.ಇದನ್ನು ಸೇವಿಸುವವರು ಕ್ಯಾನ್ಸರ್ ಕಾಯಿಲೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ನರಳಿ ಸಾವನ್ನಪ್ಪುತ್ತಾರೆ.ಆದ್ದರಿಂದ ಎಲ್ಲರು ತಂಬಾಕು ಸೇವೆಯನ್ನು ತ್ಯಜಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರರಾದ ಹರೀಶ ಸಜ್ಜನಶೇಟ್ಟಿ,ನ್ಯಾಯವಾದಿ ಯಲ್ಲಪ್ಪ ಹುಲಿಕಲ್ ಘನತ್ಯಾಜ್ಯ ನಿರ್ವಹಣೆ ಹಾಗೂ ತಂಬಾಕು ನಿಷೇಧದ ಕುರಿತು ಉಪನ್ಯಾಸ ನೀಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ ,ಯಾದಗರಿಯ ದಂತ ವೈದ್ಯರಾದ ಭಾವನಾ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಬಸವರಾಜ,ಸಹಾಯಕ ಸರಕಾರಿ ಅಭಿಯೋಜಕರಾದ ಮರೆಪ್ಪ ಹೊಸಮನಿ,ಸುರೇಶ ಪಾಟೀಲ್,ವಕೀಲರ ಸಂಘದ ಪ್ರ.ಕಾರ್ಯದರ್ಶಿ ನಂದಕುಮಾರ ಕನ್ನೆಳ್ಳಿ,ಎಮ್.ಟಿ.ಮಂಗಿಹಾಳ,ನಗರಸಭೆ ಎಇಇ ಶಾಂತಪ್ಪ,ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ,ವೈದ್ಯಾಧಿಕಾರಿ ಡಾ.ಹರ್ಷವರ್ಧನ ರಫಗಾರ ಹಾಗು ನಗರಸಭೆ ಆರೋಗ್ಯ ನಿರೀಕ್ಷಕ ಹಣಮಂತ ಯಾದವ ವೇದಿಕೆಯಲ್ಲಿದ್ದರು.ನಗರಸಭೆ ಸಮುದಾಯ ಸಂಘಟನಾಧಿಕಾರಿ ದುರ್ಗಪ್ಪ ನಾಯಕ ಕಾರ್ಯಕ್ರಮ ನಿರೂಪಿಸಿ,ಸ್ವಾಗತಿಸಿ ವಂದಿಸಿದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

3 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

15 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

17 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

18 hours ago