ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ಮಹಾಂತಪ್ಪ ಕೆ ಸಂಗಾವಿ ಅವರಿಗೆ ರಾಜ್ಯ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಸಾಮಾಜಿಕ ಜಾಲತಾಣ ಉಸ್ತುವಾರಿ ಮಹೇಶಕುಮಾರ ತೆಲ್ಲೂರಕರ್ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸುಮಾರು ವರ್ಷಗಳಿಂದ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಸಿದ್ದಾರೆ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸಿದ್ದಾರೆ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕ
ಳೆದ 8 ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪಕ್ಷಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಸಂಗಾವಿ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತೆಲ್ಲೂರಕರ್ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಪ್ರಮುಖರಾದ ಬಸವರಾಜ ಬಿರಾದಾರ, ಸಿದ್ದಾರೂಢ ದಿಕ್ಕಂಗಿ, ಶಿವಕುಮಾರ ಚಿಂಚೋಳ್ಳಿ, ಕರಣ ಬಂದರವಾಡ, ಅರುಣಕುಮಾರ ಇನಾಮದಾರ ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…