ವಾಡಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ಸ್ಥಳೀಯ ವಿವಿಧ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವಾಡಿ ವಲಯ ಘಟಕದ ವತಿಯಿಂದ ಜೂ.6 ರಂದು “ಶಾಲೆಯ ಶ್ರೇಷ್ಠ ಪ್ರತಿಭೆ” ಪ್ರಶಸ್ತಿ-ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಅಂದು ಬೆಳಗ್ಗೆ 10:30ಕ್ಕೆ ಪಟ್ಟಣದ ಸುರಕ್ಷಾ ಕ್ಯಾಂಟೀನ್ ಪ್ರದೇಶದಲ್ಲಿರುವ ಅದಾನಿ ಸಕ್ಷಮ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಚಿತ್ತಾಪುರ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಜಗದೇವಿ ಹತ್ತೂರ ಉದ್ಘಾಟಿಸುವರು.
ಕಸಾಪ ಅಧ್ಯಕ್ಷ ಸಿದ್ದಯ್ಯ ಶಾಸ್ತಿ ನಂದೂರಮಠ ಅಧ್ಯಕ್ಷತೆ ವಹಿಸುವರು. ಎಸಿಸಿ ಕಾರ್ಖಾನೆಯ ಎಚ್‌ಆರ್ ವಿಭಾಗದ ಮುಖ್ಯಸ್ಥ ಎಡ್ಡು ಕೋಟೇಶ್ವರರಾವ, ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ಎಂ.ವೀರೇಶ, ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಸದಾಶಿವ ಕಟ್ಟಿಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕಸಾಪ ಗೌರವ ಕಾರ್ಯದರ್ಶಿ ಚಂದ್ರು ಕರಣಿಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…