ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ಸಂರಕ್ಷಣೆ ದಿನಾಚರಣೆ

0
52

ಕಲಬುರಗಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಗುಲ್ಬರ್ಗಾ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ, ಸಸಿಗಳು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಪ್ರಾಧಿಕಾರದ ಅಧ್ಯಕ್ಷರಾದ ಮತ್ತು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಆದ ನಾಗಶ್ರೀ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೇ ನೈತ್ರುತ್ವ ದಲ್ಲಿ ಗುಲ್ಬರ್ಗಾ ವಕೀಲರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಹಕಾರದೊಂದಿಗೆ 18 ನ್ಯಾಯಾಲಯದ ಸಂಕೇತವಾಗಿ 18 ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಪಾಟೀಲ, ಉಪಾಧ್ಯಕ್ಷ ಧರ್ಮಣ್ಣ ಜೈನಾಪೂರ್, ವಿವಿಧ ನ್ಯಾಯಾಲಯದ ನ್ಯಾಯಾಧೀಶರು, ಕಛೇರಿ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ಹಿರಿಯ ವಕೀಲರು ಮತ್ತು ಕಿರಿಯ ನ್ಯಾಯವಾದಿಗಳು ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here