ಯುವಜನರಲ್ಲಿ ಪರಿಸರ ಪ್ರಜ್ಞೆ ಬೆಳೆಯಬೇಕು

ಚಿಂತಾಮಣಿ : ಪರಿಸರ ಸಂರಕ್ಷಣೆಯು ಕೇವಲ ಆಚರಣೆಗಳಿಗೆ ಸೀಮಿತಗೊಳ್ಳದೇ ಯುವಜನರಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸುವಂತಾಗಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಜನಪರ ಫೌಂಡೇಷನ್, ಪರಿಸರಕ್ಕಾಗಿ ನಾವು- ಚಿಕ್ಕಬಳ್ಳಾಪುರ, ಯುವಯಾನ ಚಿಂತಾಮಣಿ, ಇಕೋ ಕ್ಲಬ್ ಸ.ಪ್ರ.ದ.ಕಾಲೇಜು – ಚಿಂತಾಮಣಿ ಸಹಭಾಗಿತ್ವದಲ್ಲಿ ಕಾಲೇಜಿನಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಸರ ಉಳಿಯಬೇಕು ಎಂದರೆ ಯುವಜನರಲ್ಲಿ ಪರಿಸರದ ಅರಿವು ಮೂಡಬೇಕು ಎಂದು ಪ್ರತಿಪಾದಿಸಿದರು.

ಮನುಷ್ಯರು ವಾಸಿಸಲು ಒಂದು ಸ್ಥಾನ ಬೇಕು, ಉಸಿರಾಡಲು ಗಾಳಿ ಬೇಕು, ತಿನ್ನಲು ಆಹಾರ ಬೇಕು ಎಂದರೆ ಪರಿಸರ ಉಳಿಯಬೇಕು. ಪರಿಶುದ್ಧವಾದ ಬದುಕಿನ ಕ್ರಮ ಬೇಕಿದೆ ಅಂದರೆ ಪರಿಸರ ಬೇಕು. ಹಣ, ಆಸ್ತಿ – ಪಾಸ್ತಿಗಳಿವೆ ಎನ್ನಬಹುದು. ಆದರೆ, ವಯಸ್ಸಾಗುತ್ತಾ ಹೋದಂತೆ ಅನಾರೋಗ್ಯಗಳಿಗೆ ತುತ್ತಾಗುವುದೇ ಅಧಿಕ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಆಧುನಿಕ ಜೀವನ ಶೈಲಿಯ ಪ್ರಭಾವದಿಂದಾಗಿ ಪರಿಸರವು ಹಾಳಾಗುತ್ತಿದೆ. ಹಿಂದಿನ ಕಾಲದಲ್ಲಿ ಮಣ್ಣಿನ ಮೇಲೆ ಜನರು ನಡೆದಾಡುತ್ತಿದ್ದರು. ಆದರೆ, ಈಗ ಎಲ್ಲಿ ನೋಡಿದರೂ ಕಾಂಕ್ರೀಟ್ ನೆಲ ಹಾಸಿಗೆಗಳೇ ಕಾಣ ಸಿಗುತ್ತವೆ. ಅಲ್ಲದೆ, ಅತಿಯಾದ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ. ಹೀಗಾಗಿ, ಯುವಜನರು ತಮ್ಮ ಜೀವನ ವಿಧಾನದಲ್ಲಿ ಬದಲಾವಣೆಗೆ ಮುಂದಾಗಬೇಕು. ಹಬ್ಬಗಳು, ಸಂಭ್ರಮಗಳು, ಪ್ರೀತಿ ಪಾತ್ರರ ಹುಟ್ಟಿದ ದಿನಗಳ ಸಮಯದಲ್ಲಿ ಆಡಂಭರವನ್ನು ಕಡಿಮೆ ಮಾಡಬೇಕು. ಸಾಧ್ಯವಾದಷ್ಟು ಗಿಡ-ಮರಗಳನ್ನು ಬೆಳೆಸುವ ಕಡೆಗೆ ಯೋಚಿಸಬೇಕು ಎಂದು ಹೇಳಿದರು.

ನಮ್ಮ ಭೂಮಿಯ ಮೇಲಿರುವ ಕೇವಲ ಶೇ.3 ರಷ್ಟು ಇರುವ ನೀರನ್ನು ಮರು ಬಳಕೆ ಮಾಡುತ್ತಾ ಜೀವಿಸಬೇಕಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನೀರು ಹೆಚ್ಚು ಕಲುಷಿತವಾಗುತ್ತಿದೆ. ಬರಪೀಡಿತ ಜಿಲ್ಲೆಗಳಲ್ಲಿ ನೀರಿನ ಅಭಾವ ತಲೆದೋರಿದೆ. ಸಾವಿರಾರು ಅಡಿಗಳಿಗೆ ಬೋರ್ ವೆಲ್ ಕೊರೆದರೂ ಸಹ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಅಡಿಗಳ ನಂತರ ಸಿಗುತ್ತಿರುವ ನೀರಿನಲ್ಲಿ ರಾಸಾಯನಿಕ ಮಿಶ್ರಿತವಾದ ನೀರು ಸಿಗುತ್ತಿದೆ. ಇಂತಹ ನೀರನ್ನು ಕುಡಿಯುವ ಮೂಲಕ, ಕೃಷಿಗೆ ಬಳಸುವ ಮೂಲಕ ವಿಷವನ್ನು ಸೇವಿಸುತ್ತಿದ್ದೇವೆ. ಇತ್ತೀಚಿಗೆ ಐಐಎಸ್ಸಿ ಬೆಂಗಳೂರು ನಡೆಸಿದ ಸಂಶೋಧನೆಯಲ್ಲಿ ನಾವೀಗ ಕುಡಿಯುತ್ತಿರುವ ನೀರು ಕುಡಿಯಲು ಯೋಗ್ಯವಲ್ಲವೆಂದು ತಿಳಿಸಿದೆ ಎಂದು ಮಾಹಿತಿ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಂದ ಬೆಂಗಳೂರು ನಗರಕ್ಕೆ ಸರಬರಾಜು ಮಾಡುತ್ತಿರುವ ತರಕಾರಿಗಳಲ್ಲಿ ಅಪಾಯಕಾರಿ ಕೆಮಿಕಲ್ ಮಿಶ್ರಣವಿದೆ ಎಂದು ಇತ್ತೀಚಿಗೆ ಸರ್ಕಾರಿ ಸಂಶೋಧನಾ ಸಂಸ್ಥೆಯೇ ತಿಳಿಸಿದೆ. ಅಂತಹ ತರಕಾರಿಗಳನ್ನೇ ಇಂದಿನ ಜನರು ಸೇವಿಸುತ್ತಿದ್ದಾರೆ. ಇದರಿಂದ ಬಹಳಷ್ಟು ಅಪಾಯಕಾರಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ನುಡಿದರು.

ಜನಪರ ಫೌಂಡೇಷನ್ ನ ಕಾರ್ಯಕರ್ತ ಬಾಬುರಡ್ಡಿ ಮಾತನಾಡಿ, ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆ ಮಾತ್ರವಲ್ಲ, ನಮ್ಮ ಬದುಕಿನ ಕ್ರಮದಲ್ಲಿ ಪರಿಸರದ ಅರಿವು ರೂಢಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜನಪರ ಫೌಂಡೇಷನ್ ಯುವಯಾನ ತಂಡದ ಮೂಲಕ ಯುವಜನರಿಗೆ ಪರಿಸರ ಮೌಲ್ಯಗಳನ್ನು ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಪ್ರಸ್ತುತ ಸಂದರ್ಭದಲ್ಲಿ ಜಗತ್ತಿನಾದ್ಯಂತ ಹವಾಮಾನ ವೈಪರೀತ್ಯಗಳನ್ನು ಕಾಣುತ್ತಿದ್ದೇವೆ. ಇದಕ್ಕೆಲ್ಲಾ ಮನುಷ್ಯರಾಗಿ ನಾವೇ ಕಾರಣಕರ್ತರಾಗುತ್ತಿದ್ದು, ಅದರ ಪರಿಣಾಮ ನಮ್ಮ ಮೇಲೆ ಹಾಗೂ ನಮ್ಮಗಳ ಮುಂದಿನ ಪೀಳಿಗೆಯ ಭವಿಷ್ಯದ ಮೇಲೆ ಬೀರುತ್ತದೆ. ನೈಸರ್ಗಿಕವಾಗಿ ಕಾಪಾಡಿಕೊಂಡು ಬಂದಿರುವ ಸಂಪತ್ತನ್ನು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕಿರುವುದು ಯುವಜನರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಆ ಕಡೆಗೆ ಹೆಜ್ಜೆಯನ್ನಿಡಬೇಕು ಎಂದು ಸಲಹೆ ನೀಡಿದರು.

ಸರ್ಕಾರಗಳು ಸಹ ಪರಿಸರ ಸಂರಕ್ಷಣೆ ಹೆಸರಿನಲ್ಲಿ ಕೇವಲ ಗಿಡಗಳನ್ನು ನಾಟಿ ಮಾಡುವ ಕೆಲಸ ಮಾಡುತ್ತಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ಗಿಡನಾಟಿ ಮಾಡುವುದಷ್ಟೇ ಪರಿಸರ ಸಂರಕ್ಷಣೆಯಾಗಲ್ಲ. ಪ್ಲಾಸ್ಟಿಕ್ ಬಳಕೆ ಮತ್ತು ಉತ್ಪಾದನೆ ಕಡಿಮೆ ಮಾಡಬೇಕು, ಕಂಪನಿಗಳಿಂದ ಹೊರ ಬಿಡುವ ಅನಿಲ, ಹೊಗೆಯನ್ನು ತಡೆಯಬೇಕು, ಕೆರೆ-ಕುಂಟೆಗಳನ್ನು ಅಭಿವೃದ್ಧಿಪಡಿಸಬೇಕು, ನೂತನ ತಂತ್ರಜ್ಞಾನವನ್ನು ಅಳವಡಿಸಬೇಕು, ಕೃಷಿಯಲ್ಲಿ ರಾಸಾಯನಿಕಗಳನ್ನು ಬಳಕೆ ಮಾಡುವ ಬದಲಿಗೆ, ಸಾವಯವ ಕೃಷಿಯ ಕಡೆಗೆ ಹೆಚ್ಚು ಪ್ರೋತ್ಸಾಹ ನೀಡುವಂತಾಗಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುಗುಣಾ ಎಚ್.ಜಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಉಳಿಸಬೇಕು ಎಂದರೆ ನೀವುಗಳು ಕೆಲವೊಂದನ್ನು ತ್ಯಾಗ ಮಾಡಬೇಕಾಗುತ್ತದೆ. ಅಲ್ಲದೆ, ನೀವುಗಳು ಬಳಸುವ ಪ್ಲಾಸ್ಟಿಕ್ ಗಳನ್ನು ಬಾಟಲ್ ಗಳಲ್ಲಿ ಸಂಗ್ರಹಿಸುವ ಮೂಲಕ ಅದನ್ನೇ ಬ್ರಿಕ್ಸ್ ಗಳನ್ನಾಗಿ ಮಾಡಿ, ಮರು ಬಳಕೆ ಮಾಡಬೇಕು. ಇಂದಿನ ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲಾ ಮಾಲಿನ್ಯವೂ ಸಹ ಅಧಿಕವಾಗುತ್ತಿದೆ. ವಿಷಪೂರಕ ವಸ್ತುಗಳನ್ನು ನಾವು ಈ ಪರಿಸರಕ್ಕೆ ಕೊಡುತ್ತಿದ್ದೇವೆ. ಅಪಾಯಕಾರಿ ರಾಸಾಯನಿಕಗಳನ್ನು ಉಪಯೋಗಿಸುವ ಮೂಲಕ ಕಲುಷಿತ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದೇವೆ. ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೇರು ಬೆವರು ಕಲಾ ಬಳಗದ ಮುನಿರಾಜು ಅವರು ಪರಿಸರ ಗೀತೆಗಳನ್ನು ಪ್ರಸ್ತುಪಡಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸ್ಸಿ ಸಂಚಾಲಕರಾದ ಪ್ರೊ.ಶಿವಶಂಕರ್ ಪ್ರಸಾದ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಕವಿತಾ, ಉಪನ್ಯಾಸಕರಾದ ನಿಜಾಮುದ್ದಿನ್, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕುಸುಮಾ, ಜನಪರ ಫೌಂಡೇಷನ್ ಸಂಸ್ಥೆಯ ಕಾರ್ಯಕರ್ತರಾದ ಚೌಡಪ್ಪ, ಗಾಯತ್ರಿ, ಸಿರಿಕುಮಾರ್ ಟಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿದ್ಯಾರ್ಥಿಗಳಾದ ಐಶ್ವರ್ಯ, ಗಂಗೋತ್ರಿ, ಯುವಯಾನ ಬಳಗದ ನವೀನ್, ಬಾಲಾಜಿ, ನಯನ್, ಅಕ್ಷಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

47 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420