ಕಲಬುರಗಿ : ಲೋಕಸಭೆ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಹುರಿಯಾಳಾಗಿದ್ದ ರಾಧಾಕೃಷ್ಣ ದೊಡ್ಡನಿಯವರ ಗೆಲುವಿಗೆ ಗುಲಬರ್ಗಾ ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಯೀಮ್ ಖಾನ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಾತನಾಡಿದ ಅವರು ರಾಜ್ಯದ ಜನತೆ, ಅದರಲ್ಲೂ ಕಲಬುರಗಿ ಗ್ರಾಮೀಣ ಜನತೆ ರಾಜ್ಯದಲ್ಲಿನ ಕಾಂಗ್ರೆಸ್ ಪಂಚ ಗ್ಯಾರಂಟಿಗಳಿಗೆ ಮನಸೋತು ಮತ ಹಾಕಿದ್ದಾರೆ. ಇದಲ್ಲದೆ ಎಐಸಿಸಿ ಅಧ್ಯಕ್ಷರು ಲೋಕಸಭೆಯಲ್ಲಿ ಘೋಷಿಸಿರುವ ಅನೇಕ ಗ್ಯಾರಂಟಿಯೋಜನೆಗಳಿಗೂ ಗಮನ ಕಟ್ಟು ಜನ ಮತ ಹಾಕಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಗೆಲುವು ಸಾಧಿಸುವ ನಿರೀಕ್ಷೆ ಇತ್ತು. ಆದಾಗ್ಯೂ ಬಿಜೆಪಿ-ಜೆಡಿಎಸ್ ಮೈತ್ರಿ ದಕ್ಷಿಣದಲ್ಲಿ ಕಾಂಗ್ರೆಸ್ ಗೆಲುವಿಗೆ ಅಡ್ಡಿಯಾಗಿರಬಹುದು. ಆದರೆ ಕಲ್ಯಾಣ ನಾಡಲ್ಲಿರುವ ಎಲ್ಲಾ 5 ಸ್ಥಾನ ಗೆದ್ದು ಬೀಗಿದ್ದೇವೆ. ಎಐಸಿಸಿ ಅಧ್ಯಕ್ಷರ ತವರು ನಾಡು ಈ ಭಾಗದಲ್ಲಿ ಕಾಂಗ್ರೆಸ್ ಮತ್ತೆ ಎಂದಿನಂತೆ ಕಳೆಗಟ್ಟಿದೆ ಕಾಂಗ್ರೆಸ್ ಕಲ್ಯಾಣಕ್ಕೆ ನೀಡಿರುವ ಕಲಂ 371 ಜೆ ಕೊಡುಗೆ ಫಲ ದೇಶದಲ್ಲೇ ಇಂಡಿಯಾ ಒಕ್ಕೂಟಕ್ಕೆ ಜನ ಬೆಂಬಲಿಸಿದ್ದಾರೆ. ಎಂದು ನಯೀಮ್ ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…