ಶಹಾಪೂರ: ಯಾದಗೀರಿ ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಆಮೀನ್ ರೆಡ್ಡಿ ಅವರನ್ನು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನದಿಂದ ವಜಾ ಮಾಡುವ ಮೂಲಕ ಬಿಜೆಪಿ ಪಕ್ಷವನ್ನು ಉಳಿಸಿಕೊಳ್ಳಬೇಕು ಎಂದು ಶಹಾಪೂರ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ರಾಯಚೂರು ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸೋಲಲು ಯಾದಗಿರಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಮಾಡುವಲ್ಲಿ ವಿಫಲರಾಗಿ, ಕೇವಲ ಮೋದಿಯವರ ಹೆಸರಿನಲ್ಲಿ ಮತ ದೊರೆಯಲಿದೆ ಎನ್ನುವ ದುಸಾಹಸ ದಿಂದ ಸ್ಥಳೀಯ ನಾಯಕರನ್ನು ಒಗ್ಗೂಡಿಸುವಲ್ಲಿ ಆದ ಕೊರತೆಯಿಂದಾಗಿ ಹಾಗೂ ಸ್ಥಳೀಯ ನಾಯಕರ ಕಡೆಗಣನೆ ಮತ್ತು ವಿಶೇಷವಾಗಿ ಮೈತ್ರಿ ಪಕ್ಷದ ಮಾಜಿ ಶಾಸಕರಾದ ಗುರು ಪಾಟೀಲ ಅವರನ್ನು ಚುನಾವಣಾ ಕಣದಲ್ಲಿ ಸಕ್ರಿಯಗೊಳಿಸುವಲ್ಲಿ ವಿಫಲವಾಗಿರುವ ಯಾದಗೀರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಅಮೀನರಡ್ಡಿ ಯಾಳಗಿ ಅವರೇ ನೇರ ಕಾರಣೀಭೂತರು, ಇದಕ್ಕೆ ಪೂರಕವೆಂಬಂತೆ ಕಳೆದ ಬಾರಿ ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಶಹಾಪೂರ ಮತಕ್ಷೇತ್ರದಿಂದ 19000 ಸಾವಿರ ಅಧಿಕ ಮತಗಳ ಅಂತರದಿಂದ ವೋಟ್ ನೀಡುವ ಮುಖಂತಾರ ಬಿಜೆಪಿ ಗೆಲುವಿಗೆ ಪಾತ್ರವಾಗಿತ್ತು, ಪ್ರಸ್ತುತ ಸಂಘಟನೆ ಇಲ್ಲದ ಕಾರಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…