ಎಸ್.ಬಿ.ಆರ್. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ: ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇಂದು, ‘ವಿಶ್ವ ಪರಿಸರ ದಿನಾಚರಣೆ’ ಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.

ಪ್ರಾಚಾರ್ಯರಾದ ಶ್ರೀ ಎನ್ ಎಸ್ ದೇವರಕಲ್ ಸರ್ ಅವರ ಮಾರ್ಗದರ್ಶನದಲ್ಲಿ, ಮೇಲ್ವಿಚಾರಕರಾದ ಡಾ. ಶ್ರೀಶೈಲ್ ಹೊಗಾಡೆಯವರು ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಸೇರಿ ಎಸ್.ಬಿ.ಆರ್ ಕ್ಯಾಂಪಸ್ ನಲ್ಲಿ ಅನೇಕ ಸಸಿಗಳನ್ನು ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಭೂಮಿಕಾ ‘ವಿಶ್ವ ಪರಿಸರ ದಿನಾಚರಣೆ’ಯ ಮಹತ್ವವನ್ನು ಕುರಿತು ಮಾತನಾಡಿದರು.

ಇಂದು ವಿಶ್ವ ಪರಿಸರ ದಿನ. ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೆÇೀಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು, ಎನ್‍ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ ಎಂದು ಹೇಳಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

10 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420