ಕಲಬುರಗಿ: ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋದಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಹಾಗು ಜನ ಜೀವನದ ಮೇಲಿನ ಧಾಳಿಗಳನ್ನು ಸಹಿಸುವುದಿಲ್ಲವೆಂಬ ಸಂದೇಶವನ್ನು ಜನತಾ ತೀರ್ಪು ನೀಡಿ ಜನತಾ ತೀರ್ಪು ಬಿಜೆಪಿ ಮತ್ತು ನರೇಂದ್ರ ಮೋದಿಯವರಿಗೆ ಮುಖಭಂಗ ಉಂಟು ಮಾಡಿದೆ ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು.ಬಸವರಾಜ, ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ವಿಶ್ಲೇಷಿಸಿದ್ದಾರೆ.
ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಸಂಕಷ್ಟ, ಪ್ರಜಾಪ್ರಭುತ್ವ ಹಾಗು ಸಂವಿಧಾನದ ಮೇಲಿನ ದಾಳಿ ಮತ್ತು ಕೋಮು ದ್ವೇಷದ ವಿರುದ್ದ ಒಟ್ಟಾಗಿ ನಿಂತುದು INDIA ಕೂಟದ ಜೊತೆ ಜನತೆ ನಿಲ್ಲಲು ಕಾರಣವಾಗಿದೆ. ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿಯವರು ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಾಡಿದ ದ್ವೇಷ ಭಾಷಣದ ವಿರುದ್ದ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದಲ್ಲಿ ಖಂಡಿತವಾಗಿ ಬಿಜೆಪಿ ಮತ್ತಷ್ಟು ಹಿನ್ನಡೆ ಅನುಭವಿಸುತ್ತಿತ್ತು ಎಂದು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಸಿಪಿಐ(ಎಂ) 04, ಸಿಪಿಐ ಹಾಗೂ ಸಿಪಿಐ(ಎಂ,ಎಲ್) ತಲಾ 02 ಸೇರಿ ಒಟ್ಟಾಗಿ ಎಡಪಕ್ಷಗಳು 08 ಸ್ಥಾನಗಳನ್ನು ಪಡೆದು ಹಿಂದಿಗಿಂತ ಉತ್ತಮ ಸ್ಥಿತಿ ಹೊಂದಿವೆ. ಕರ್ನಾಟಕದಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗು ಜನಾರ್ದನ ರೆಡ್ಡಿ ಜೊತೆ ಕೈ ಜೋಡಿಸಿಯೂ ಮತ್ತು ಲಿಂಗಾಯತ ಹಾಗು ಒಕ್ಕಲಿಗ ಜಾತಿ ಸಮೀಕರಣ ಮಾಡಿ, ಕೋಮುವಾದ ಅಪ್ಪಿಕೊಂಡಿದ್ದರೂ, ನರೇಂದ್ರ ಮೋದಿ ದೇವೇಗೌಡರ ಪ್ರಚಾರ ನಡೆಸಿಯೂ ಅದು ಹಿನ್ನಡೆ ಅನುಭವಿಸಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ 5 ರಷ್ಟು ಮತಗಳ ಹಿನ್ನಡೆ ಕಂಡಿದ್ದು, ಸಿಪಿಐ(ಎಂ) ಮತ್ತಿತರೆ ಪ್ರಜಾಸತ್ತಾತ್ಮಕ ಶಕ್ತಿಗಳ ಕರೆಗೆ ಓಗೊಟ್ಟು ಬಿಜೆಪಿಯನ್ನು ಹಿಮ್ಮೆಟ್ಟಿಸಿ, ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮುಂದಾದದ ಜನತೆಯನ್ನು ಪಕ್ಷ ಅಭಿನಂದಿಸುತ್ತದೆ ಎಂದಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…