ಕಲಬುರಗಿ: ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ, ಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅರಂಭಗೊಂಡಿದೆ.
ಈಶಾನ್ಯ ಪದವೀಧರ ಮತ ಎಣಿಕೆ ಹಿನ್ನೆಲೆ ಬೆಳಿಗ್ಗೆ 8 ಗಂಟೆಗೆ ಪೋಸ್ಟಲ್ ಬಾಕ್ಸ್ ಓಪನ್ ಮಾಡಿ ಮತಪತ್ರಗಳ ರ‌್ಯಾಂಡಮೈಜೇಷನ್ ಮಾಡಿ ತಲಾ 25 ಮತಗಳ ಬಂಡಲ್ ಕಟ್ಟುವ ಕಾರ್ಯ ಮುಗಿದಿದೆ. ಸಂಜೆ 4 ಗಂಟೆಗೆ 14 ಟೇಬಲ್ ಮೂಲಕ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಚಲಾವಣೆಯಾದ 1,09,082 ಮತಗಳ ಎಣಿಕೆ ಕಾರ್ಯ ಮುಗಿದ ಮೇಲೆ ಪುರಸ್ಕೃತ ಮತ್ತು ತಿರಸ್ಕೃತ ಮತಗಳು ಹಾಗೂ ಅಭ್ಯರ್ಥಿವಾರು ಪ್ರಥಮ ಪ್ರಾಶಸ್ತ್ಯ ಪಡೆದ ಮತಗಳ ಮಾಹಿತಿ ಲಭ್ಯವಾಗಲಿದೆ ನಂತರ ವಿನ್ನಿಂಗ್ ಕೋಟಾ ಶೇ.50+1 ಫಿಕ್ಸ್ ಮಾಡಲಾಗುತ್ತದೆ ತದನಂತರ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ವಿನ್ನಿಂಗ್ ಕೋಟಾ ನಿಯಮದಂತೆ ಶೇ.50+1 ಮತ ಯಾವುದೇ ಅಭ್ಯರ್ಥಿ ಪಡೆದಿದ್ದಲ್ಲಿ ಅವರನ್ನು ವಿಜಯಶಾಲಿ ಎಂದು ಘೋಷಿಸಲಾಗುತ್ತದೆ.
ಒಂದು ವೇಳೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಯಾವುದೇ ಅಭ್ಯರ್ಥಿಗೆ ಶೇ.50+1 ಮತ ಸಿಗದಿದ್ದಲ್ಲಿ ಆಗ ಎಲಿಮಿನೇಟ್ ರೌಂಡ್ ಆರಂಭವಾಗಿ ಅತ್ಯಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ಎಲಿಮಿನೇಟ್ ಮಾಡಿ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಆರಂಭವಾಗಲಿದ್ದು, ಟ್ರೆಂಡ್ಸ್ ಮಾಹಿತಿ ರಾತ್ರಿ 9-10 ಗಂಟೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಮತ ಏಣಿಕೆ ಕೇಂದ್ರದಲ್ಲಿ ಚುನಾವಣಾ ಅಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಚುನಾವಣೆ ವೀಕ್ಷಕರಾದ ಎಂ ಮಹೇಶ್ವರ ರಾವ್, ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ, ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಮುಂತಾದವರು ಇದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…