ಬಿಸಿ ಬಿಸಿ ಸುದ್ದಿ

ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜಗದೇವ್ ಗುತ್ತೇದಾರ್ ಸೇರಿ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು; ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜು, ಜಗದೇವ ಗುತ್ತೇದಾರ್ ಕಾಳಗಿ, ಶ್ರೀಮತಿ ಬಲ್ಕೀಸ್ ಬಾನು, ಎನ್.ಎಸ್.ಬೋಸರಾಜು, ಡಾ.ಯತೀಂದ್ರ ಎಸ್ ಹಾಗೂ ಎ.ವಸಂತ್‍ಕುಮಾರ್, ಭಾರತೀಯ ಜನತಾ ಪಕ್ಷದಿಂದ ಮೂಳೆ ಮಾರುತಿರಾವ್, ಸಿ.ಟಿ.ರವಿ ಮತ್ತು ರವಿಕುಮಾರ್.ಎನ್ ಹಾಗೂ ಜಾತ್ಯಾತೀತ ಜನತಾದಳದಿಂದ ಟಿ.ಎನ್.ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ದ್ವೈವಾರ್ಷಿಕ ಚುನಾವಣೆಯನ್ನು ಜೂನ್ 13 ರಂದು ನಿಗಧಿಪಡಿಸಲಾಗಿತ್ತು. ಮೇ 27 ರಿಂದ ಮೇ 3 ರವರೆಗೆ ನಾಮಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಒಟ್ಟು 12 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಜೂನ್ 4 ರಂದು ನಾಮಪತ್ರಗಳನ್ನು ಪರಿಶೀಲನೆಗೆ ತೆಗೆದುಕೊಳ್ಳಲಾಗಿತ್ತು.

ಪರಿಶೀಲನೆಯ ಸಂದರ್ಭದಲ್ಲಿ ಆಸಿಫ್ ಪಾಷ ಆರ್.ಎಂ. ಎಂಬವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕøತಗೊಂಡಿದ್ದು, ಉಳುದ 11 ಜನಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು. ಜೂನ್ 6 ಮಧ್ಯಾಹ್ನ 3 ಗಂಟೆಯವರಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಯಾರೂ ನಾಮಪತ್ರಗಳನ್ನು ಹಿಂಪಡೆದಿರುವುದಿಲ್ಲ. ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿರುತ್ತಾರೆ ಎಂದು ಕರ್ನಾಟಕ ವಿಧಾನಪರಿಷತ್ತಿನ ದ್ವೈವಾರ್ಷಿಕ ಚುನಾವಣೆ -2024ರ ಚುನಾವಣಾಧಿಕಾರಿಗಳು ಹಾಗೂ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago